ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯ ತಾಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಹಾಗೂ ಸರ್ಕಾರಿ ಪ್ರೌಢಶಾಲೆ ಶಿವಪುರ ಇವರ ವತಿಯಂದ ನಡೆದ ಕಾರ್ಕಳ ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯ ಮೂವರು ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರಾಥಮಿಕ ವಿಭಾಗದ ಏಳನೇ ತರಗತಿಯ ಸಮೃದ್ದ್ ಭಂಡಾರಿ, ಪ್ರೌಢಶಾಲಾ ವಿಭಾಗದ ಒಂಬತ್ತನೇ ತರಗತಿಯ ಮೌಲ್ಯ ಹಾಗೂ ಹತ್ತನೇ ತರಗತಿಯ ವರುಣ್ ಕಾಮತ್ ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಾಗಿದ್ದಾರೆ.

Leave a Reply

Your email address will not be published. Required fields are marked *