ಮಂಗಳೂರು: ವಿಮಾನ ಅಪಘಾತದಲ್ಲಿ ಮಡಿದವರಿಗೆ ಮೇ 22 ರಂದು ಶ್ರದ್ಧಾಂಜಲಿ

ಮಂಗಳೂರು: 2010 ರ ಮೇ ತಿಂಗಳಿನಲ್ಲಿ ಬಜ್ಜೆ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತವಾದ ಹಿನ್ನಲೆಯಲ್ಲಿ, ಜಿಲ್ಲಾಡಳಿತವು ಮಡಿದವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಜರಗಿಸುತ್ತಾ ಬಂದಿದ್ದು, ವಿಮಾನ ಅಪಘಾತದಲ್ಲಿ ಮರಣ ಹೊಂದಿ ಗುರುತಿಸಲಾಗದ 12 ಮಂದಿಯ ಮೃತದೇಹಗಳನ್ನು ಸಮಾಧಿ ಮಾಡಿದ ಜಾಗದಲ್ಲಿ ವಿಮಾನ ಅಪಘಾತದಲ್ಲಿ ಮಡಿದ 158 ಜನರ ನೆನಪಿಗಾಗಿ ಕೂಳೂರು ಸೇತುವೆಯಿಂದ ತಣ್ಣೀರು ಬಾವಿ ರಸ್ತೆಗೆ ತಿರುಗುವಲ್ಲಿ ಪಾರ್ಕ್ ನಿರ್ಮಾಣ ಮಾಡಲಾಗಿರುತ್ತದೆ.

ಪ್ರತೀ ವರ್ಷದಂತೆ ಈ ಬಾರಿಯೂ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಮೇ 22 ರಂದು ಬೆಳಿಗ್ಗೆ 10 ಗಂಟೆಗೆ ಕೂಳೂರು ಸೇತುವೆಯಿಂದ ತಣ್ಣೀರು ಬಾವಿ ರಸ್ತೆಗೆ ತಿರುಗುವಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *