ವರದಿ ರಾಯಿ ರಾಜಕುಮಾರ
ಉಡುಪಿ, ನಾಡ್ಪಾಲು: ಉಡುಪಿ ತಾಲೂಕಿನ ನಾಡ್ಪಾಲು ಗ್ರಾಮ ಪಂಚಾಯತ್ ನ ಸಭಾಭವನದಲ್ಲಿ ಸಾರ್ವಜನಿಕ ಸನ್ಮಾನ ಕಾರ್ಯಕ್ರಮ ನಡೆಯಿತು.

ಗ್ರಾಮ ಪಂಚಾಯಿತಿಗೆ ಶವ ಶೀತಲೀಕರಣ ಯಂತ್ರವನ್ನು ಕೊಡುಗೆಯಾಗಿ ನೀಡಿದ ಉಡುಪಿ ಗಾಂಧಿ ಆಸ್ಪತ್ರೆಯ ಡಾ. ಹರೀಶ್ ಚಂದ್ರ ಭಟ್ ಹಾಗೂ ಅಂತರಾಷ್ಟ್ರೀಯ ಕ್ರೀಡಾ ಸ್ಪರ್ಧೆಗಳಲ್ಲಿ ಸಾಧನೆ ಮಾಡಿದ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಾಡ್ಪಾಲು ಗ್ರಾಮದ ತಿಂಗಳಮಕ್ಕಿ ನಿವಾಸಿ ಎರ್ಮಾಳು ಕುಮಾರಸ್ವಾಮಿ ಇವರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು.
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತನ್ನು 5 ವರ್ಷ ಉತ್ತಮ ರೀತಿಯಲ್ಲಿ ಮುನ್ನಡೆಸಿದ ಸದಸ್ಯರಿಗೆ ಅಭಿನಂದನೆಯನ್ನು ಸಲ್ಲಿಸಲಾಯಿತು.
ವೇದಿಕೆಯಲ್ಲಿ ಪಿ ಡಿ ಓ ಶೀತಲ್, ಗ್ರಾಮ ಪಂಚಾಯತ್ ಅಧ್ಯಕ್ಷ ನವೀನ್ ಪೂಜಾರಿ, ಮಾಜಿ ಅಧ್ಯಕ್ಷ ದಿನೇಶ್ ಹೆಗ್ಡೆ, ಹಾಗೂ ಪಂಚಾಯತ್ನ ಎಲ್ಲ ಸದಸ್ಯರುಗಳು ಹಾಜರಿದ್ದರು.
