ಉಡುಪಿ- ಉಚ್ಚಿಲ ದಸರಾ ಶೋಭಾಯಾತ್ರೆ : ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಡುಪಿ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ 2026 ಪ್ರಯುಕ್ತ ಅಕ್ಟೋಬರ್ 21 ರಂದು ಬೃಹತ್ ಶೋಭಾಯಾತ್ರೆ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಸಾಗಲಿರುವ ಹಿನ್ನೆಲೆ, ವಾಹನ ದಟ್ಟಣೆಯಾಗಿ ಸಂಚಾರ ದಟ್ಟಣೆ ಆಗುವ ಸಾಧ್ಯತೆ ಇದ್ದು, ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆಯನ್ನು ಒದಗಿಸುವ ದೃಷ್ಟಿಯಿಂದ ಸದರಿ ದಿನದಂದು ಈ ಕೆಳಕಂಡಂತೆ ವಾಹನಗಳ ಸಂಚಾರಕ್ಕೆ ಮಾರ್ಗ ಬದಲಾವಣೆ ಹಾಗೂ ಸಂಚಾರ ನಿಷೆಧಕ್ಕೆ ಸಂಬಂಧಿಸಿದಂತೆ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶ ಹೊರಡಿಸಿರುತ್ತಾರೆ.

ಉಡುಪಿ-ಮಂಗಳೂರು ಮಾರ್ಗವಾಗಿ ಬರುವ ಘನ ವಾಹನಗಳನ್ನು ಅಪರಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಬದಲಿ ಮಾರ್ಗವಾಗಿ ಕಟಪಾಡಿ-ಶಿರ್ವಾ-ಬೆಳ್ಮಣ್-ಪಡುಬಿದ್ರಿ ಮಾರ್ಗವಾಗಿ ಸಂಚರಿಸಬೇಕು.
ಉಡುಪಿ ಕಡೆಯಿಂದ ಬಜ್ಪೆ ಏರ್ಪೋರ್ಟ್ ಗೆ ಹೋಗುವ ವಾಹನಗಳು ಕಟಪಾಡಿ-ಶಿರ್ವಾ-ಬೆಳ್ಮಣ್-ಮುಂಡ್ಕೂರು ಮಾರ್ಗವಾಗಿ ಸಂಚರಿಸಬೇಕು.
ಟ್ರಕ್, ಲಾರಿ, ಟ್ಯಾಂಕರ್ ಮುಂತಾದ ಘನ ವಾಹನಗಳನ್ನು ರಾತ್ರಿ 9 ಗಂಟೆಯವರೆಗೆ ಕುಂದಾಪುರ, ಉಡುಪಿ ಕಡೆಗಳಲ್ಲಿ ಟ್ರಕ್ ಬೇ ಯಲ್ಲಿ ನಿಲ್ಲಿಸಿ ನಂತರ ಸಂಚಾರ ಮುಂದುವರೆಸಬೇಕು. ಉಡುಪಿಯಿಂದ ಮಂಗಳೂರು ಮಾರ್ಗವಾಗಿ ಬೆಂಗಳೂರು ಸಂಚರಿಸುವ ರಾತ್ರಿ ಪ್ರಯಾಣಿಕ ಬಸ್ಸುಗಳು ರಾತ್ರಿ 9 ಗಂಟೆ ನಂತರ ಉಡುಪಿಯಿಂದ ಸಂಚರಿಸಬೇಕು. ಮಂಗಳೂರು-ಉಡುಪಿ ಮಾರ್ಗವಾಗಿ ಅಪರಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಘನ ವಾಹನಗಳ ಸಂಚಾರ ನಿಷೆಧಿಸಿದೆ.

ಈ ಅಧಿಸೂಚನೆಯನ್ನು ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮ 1989 ರ ನಿಯಮ 221 5(ಎ) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಹೊರಡಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *