ಕಾರ್ಕಳ: ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಾರ್ಕಳ, ಜೂನ್ 05 : ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಸಂಸ್ಥೆಯ ಫಾ.ಎಫ್.ಪಿ.ಎಸ್. ಮೋನಿಸ್ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಪ್ರಾಥಮಿಕ ವಿಭಾಗದ ಮುಖ್ಯೋಪಧ್ಯಾಯರಾದ ಐ. ಕ್ರಿಸ್ಟೋಫರ್ ಕೋಟ್ಯಾನ್‍ರವರು ಅವರು ಮಾತನಾಡಿ “ಈ ದಿನವು ಪ್ರಕೃತಿಯ ಹುಟ್ಟು ಹಬ್ಬವಾದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ತಾಯಿಯ ಹೆಸರಿನಲ್ಲಿ ಒಂದು ಗಿಡವನ್ನು ನೆಡುವುದರ ಮೂಲಕ ಪರಿಸರವನ್ನು ಸಂರಕ್ಷಿಸೋಣ” ಎಂದು ಹೇಳಿದರು. ಸಂಸ್ಥೆಯ ಪ್ರಾಥಮಿಕ ವಿಭಾಗದ ಶಿಕ್ಷಕಿ ದೀಪ್ತಿ ಹಾಗೂ ಏಳನೇ ತರಗತಿಯ ವಿದ್ಯಾರ್ಥಿಯಾದ ಆ್ಯಶ್ನನ್ ಡಿಸೋಜಾ ಪರಿಸರ ದಿನಾಚರಣೆಯ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಸಂಸ್ಥೆಯ ಪ್ರಾಥಮಿಕ ವಿಭಾಗದ ಉಪಪ್ರಚಾರ್ಯರಾದ ಸಿ|ಜಾಲಿ ಜೇಕಬ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಏಳನೇ ತರಗತಿಯ ವಿದ್ಯಾರ್ಥಿನಿ ನಿಯೋನಾ ಮೆಂಡೋನ್ಸಾ ಕಾರ್ಯಕ್ರಮ ನಿರ್ವಹಿಸಿದರು.

Leave a Reply

Your email address will not be published. Required fields are marked *