ಉಡುಪಿ: ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಅ. 14 ರಂದು ನಗರದ ಅಜ್ಜರಕಾಡು ಜಿಲ್ಲಾ ಆರೋಗ್ಯ ಮತ್ತು ಕು.ಕ ಅಧಿಕಾರಿಯವರ ಕಚೇರಿಯ ಶ್ರೀ ಕೃಷ್ಣ ಸಭಾಂಗಣದಲ್ಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ 2026 ರ ಕಾರ್ಯಕ್ರಮವನ್ನು ಆಚರಿಸಲಾಯಿತು.

ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಕಾರ್ಯಕ್ರಮ ಉದ್ಘಾಟಿಸಿ, ಮಾನಸಿಕ ಆರೋಗ್ಯಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕು.ಕ ಅಧಿಕಾರಿ ಡಾ. ಬಸವರಾಜ ಜಿ. ಹುಬ್ಬಳ್ಳಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಉಡುಪಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ. ಲತಾ ನಾಯಕ್, ಟೆಲಿ ಮನಸ್, ಇ.ಸಿ.ಆರ್.ಸಿ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಬರುವ ಇತರ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *