ಮಾಳ: ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ವಿಶ್ವ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ 5, 6, 7ನೇ ತರಗತಿಯ ವಿದ್ಯಾರ್ಥಿಗಳು ಕೆಲವು ಮಾದರಿಗಳನ್ನು ತಯಾರಿಸಿ ಪ್ರದರ್ಶನ ಮಾಡಿದರು. ಯಾವುದೇ ಖರ್ಚು ಇಲ್ಲದೆ ತಯಾರಿಸಿದ ವಿಜ್ಞಾನ ಮಾದರಿ ಪ್ರದರ್ಶನ ಚೆನ್ನಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಶ್ರೀ ಗುರುಕುಲ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಗೀತಾ ಸೇರಿಗಾರ್, ಸದಸ್ಯರಾದ ವಸಂತಿ, ತಾರಾ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಪೂರ್ಣಿಮಾ ಶೆಣೈ ವಿಜ್ಞಾನ ದಿನಾಚರಣೆ ಮತ್ತು ವಿಶ್ವ ಪುಸ್ತಕ ದಿನದ ಶುಭಾಶಯ ತಿಳಿಸಿದರು. ವಿಜ್ಞಾನ ಶಿಕ್ಷಕಿ ಶುಭಾ ಸ್ವಾಗತಿಸಿ ವಂದಿಸಿದರು. ಎಲ್ಲಾ ಶಿಕ್ಷಕರು ಸಹಕರಿಸಿದರು.
