ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಕ್ರೀಡಾ ದಿನಾಚರಣೆ

ಮಾಳ: ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಆಗಸ್ಟ್ 29ರಂದು ವಿಶ್ವ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.

ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಮಕ್ಕಳು ದೀಪವನ್ನು ಬೆಳಗುವ ಮೂಲಕ ಕಾರ್ಯಕ್ರಮ ವನ್ನು ಉದ್ಘಾಟಿಸಿದರು. ಶಾಲಾ ಮುಖ್ಯಮಂತ್ರಿ ಶರಣ್ಯಾ ಜೋಶಿ ಇವರು ಮೇಜರ್ ಧ್ಯಾನ್ ಚಂದ್ ಇವರ ಬಗ್ಗೆ ಮಾಹಿತಿಯನ್ನು ಮಕ್ಕಳಿಗೆ ನೀಡಿದರು. ಮಕ್ಕಳಿಗೆ ಮನೋರಂಜನ ಆಟಗಳನ್ನು ಆಡಿಸಲಾಯಿತು. ಕಾರ್ಯಕ್ರಮದ ನಿರ್ವಹಣೆಯನ್ನು ಶೋಭಾ ಜೈನ್ ಇವರು ನಿರ್ವಹಿಸಿದರು.
ಈ ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಎಲ್ಲಾ ಮಕ್ಕಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *