ಆಟಿ ಅಮಾವಾಸ್ಯೆಯಂದು ಕುಡಿಯುವ ಕಹಿ ರುಚಿಯ ಪಾಲೆ ಮರದ ಕಷಾಯವು ತುಳುನಾಡಿನ ಪ್ರಮುಖ ಜಾನಪದ ಔಷಧಿಯಾಗಿದೆ- Pavan Kumar Shirva

ಪವನ್ ಕುಮಾರ್ ಶಿರ್ವ
ಲೇಖಕರು
ಉಡುಪಿ ಜಿಲ್ಲೆ

ಆಟಿ ಅಮಾವಾಸ್ಯೆಯಂದು ತುಳುನಾಡು ಮತ್ತು ಕರಾವಳಿ ಭಾಗದಲ್ಲಿ ಆಟಿ ಅಮಾವಾಸ್ಯೆ ಸೂರ್ಯೋದಯಕ್ಕೂ ಮುನ್ನ ‘ಪಾಲೆ ಮರ’ದ ತೊಗಟೆಯಿಂದ ತಯಾರಿಸುವ ವಿಶೇಷ ಕಹಿ ಕಷಾಯವನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯಲಾಗುತ್ತದೆ. ಇದು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಮಳೆಗಾಲದ ಕಾಯಿಲೆಗಳಿಂದ ರಕ್ಷಿಸುತ್ತದೆ ಎಂಬ ನಂಬಿಕೆಯಿದೆ.ಸೂರ್ಯೋದಯಕ್ಕೂ ಮುಂಚಿತವಾಗಿ ಹಿರಿಯರು ಮರದ ತೊಗಟೆಯನ್ನು ತಂದು, ಅದರ ಮೇಲಿನ ಹೊರಚರ್ಮವನ್ನು ಸವರಿ ತೆಗೆಯುತ್ತಾರೆ..

ತುಳುನಾಡಿನಲ್ಲಿ ಆಟಿ ತಿಂಗಳಲ್ಲಿ ಆಚರಿಸುವ ಅಮಾವಾಸ್ಯೆಯಾಗಿದೆ. ಈ ಅಮಾವಾಸ್ಯೆಯನ್ನು ಆಷಾಡ ಅಮಾವಾಸೆ, ದೀವಿಗೆ ಕರ್ನಾಟಕ ಅಮಾವಾಸ್ಯೆ ಅಥವಾ ಭೀಮನ ಅಮಾವಾಸ್ಯೆ ಎಂದೂ ಕರೆಯುತ್ತಾರೆ. ಆಟಿ ತಿಂಗಳಲ್ಲಿ ಬರುವ ಈ ಅಮಾವಸ್ಯೆಯು ತುಳುವ ಜನರಿಗೆ ವಿಶೇಷವಾದ ದಿನ ಹಾಗೂ ಇದು ಹಿಂದಿನಿಂದಲೂ ಆಚರಿಸುತ್ತಾ ಬಂದಿರುವ ಆಚರಣೆಯಾಗಿದೆ. ಈ ದಿನದಂದು ತುಳುನಾಡು ಜನರು ‘ಪಾಲೆ ಮರ’ ದ ‘ಮರದ ತೊಗಟೆಯನ್ನು ಕೆತ್ತಿ ಅದರಿಂದ ಕಷಾಯ/ಮದ್ದನ್ನು ತಯಾರಿಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುತ್ತಾರೆ. ತುಳುನಾಡಿನಲ್ಲಿ ಆಟಿ ಎಂಬುದು ಒಂದು ತಿಂಗಳಿನ ಹೆಸರಾಗಿದೆ. ಆಟಿ ತಿಂಗಳನ್ನು ಅನಿಷ್ಟ ತಿಂಗಳೆಂದೂ ಕರೆಯುತ್ತಾರೆ. ಏಕೆಂದರೆ, ಆಟಿ ತಿಂಗಳಲ್ಲಿ ಕ್ರಿಮಿಕೀಟಗಳ ತೊಂದರೆ ಅಧಿಕವಾಗಿರುವುದರ ಜೊತೆಗೆ ಅಧಿಕವಾದ ಮಳೆಯೂ ಇರುತ್ತದೆ. ಈ ಸಂದರ್ಭದಲ್ಲಿ ಮನೆಬಿಟ್ಟು ಹೊರಹೋಗಲಾಗುವುದಿಲ್ಲ. ಹೀಗಾಗಿ ಆಟಿ ತಿಂಗಳನ್ನು ಅನಿಷ್ಟವೆಂದು ಕರೆಯುತ್ತಾರೆ ಅಥವಾ ಅನಿಷ್ಟವೆಂಬ ನಂಬಿಕೆಯಿದೆ. ಈ ಅನಿಷ್ಟಗಳನ್ನೆಲ್ಲ ಕಳೆಯಲು ಆಟಿ ಕಳಂಜೆ ಬರುತ್ತಾನೆ ಎಂಬ ವಾಡಿಕೆ ತುಳುನಾಡಿನಲ್ಲಿದೆ. ಆಟಿ ಅತ್ಯಂತ ಹಳೆಯ ಸಾಂಪ್ರದಾಯಿಕ ಭಾರತೀಯ ಸೌರ ಕ್ಯಾಲೆಂಡರ್‌ನ ನಾಲ್ಕನೇ ತಿಂಗಳಾಗಿದೆ. ಈ ದಿನದಂದು ಕಹಿ ರುಚಿಯ ಹಾಲೆ ಮರದ ಕಷಾಯವನ್ನು ಕುಡಿಯುವುದರಿಂದ ಅನಾರೋಗ್ಯವು ಕಮ್ಮಿಯಾಗುತ್ತದೆ ಹಾಗೂ ಇದು ಜೀರ್ಣಾಂಗ ವ್ಯವಸ್ಥೆಯನ್ನು ಸ್ವಚ್ಛಗೊಳಿಸುತ್ತದೆ ಮತ್ತು ರೋಗಗಳ ವಿರುದ್ಧ ಹೋರಾಡಲು ಔಷಧೀಯ ಶಕ್ತಿಯನ್ನು ನೀಡುತ್ತದೆ ಎಂದು ಹೇಳಲಾಗುತ್ತದೆ. ಆದ್ದರಿಂದ ಖಾಲಿ ಹೊಟ್ಟೆಯಲ್ಲಿ ಪಾಲೆದ ಕಷಾಯ ಸೇವಿಸಿದಾಗ ಅದರ ಸಂಪೂರ್ಣ ಉಪಯೋಗವಾಗುವುದು

ಪಾಲೆ ಮರದ ತೊಗಟೆಯನ್ನು ತೆಗೆಯುವ ವಿಧಾನ:-
ಮನೆಯ ಯಜಮಾನ ಅಮಾವಾಸ್ಯೆಯ ಹಿಂದಿನ ದಿನ ಕಾಡಿಗೆ ಹೋಗಿ ಪಾಲೆ ಮರವನ್ನು ಹುಡುಕಿ ತೆಗೆದು ಮರಕ್ಕೆ ಏನಾದರೂ ಗುರುತನ್ನು ನೀಡಿ ಬರುತ್ತಾನೆ..ಒಣ ಬಾಳೆ ಎಲೆಗಳನ್ನು ಹಗ್ಗದಿಂದ ಕಟ್ಟಿ ಮರದ ಕೆಳಗೆ ಕಲ್ಲು ಇಡುತ್ತಾರೆ. ಮರುದಿನ ಅಂದರೆ ಆಟಿ ಅಮಾವಸ್ಯೆಯ ದಿನದಂದು ಸೂರ್ಯೋದಯಕ್ಕೂ ಮುನ್ನ ಪಾಲೆಮರದ ಬುಡಕ್ಕೆ ತೆರಳಿ ಕೈಯಲ್ಲೊಂದು ಪೊರಕೆ ಹಿಡಿದು ಮರಕ್ಕೆ ಸುತ್ತು ಬಂದು ಅದರಿಂದ ಮರಕ್ಕೆ ಮೂರು ಪೆಟ್ಟು ಕೊಡುತ್ತಾನೆ.ನಂತರ ಮರದ ಕೆತ್ತೆ ಯನ್ನು ಕಲ್ಲಿನಿಂದ ಗುದ್ದಿ ತೆಗೆಯಬೇಕು. ಹಾಗೆ ಕಲ್ಲಿನಿಂದ ಗುದ್ದುವಾಗ ಪಾಲೆಮರವು ಬಿಳಿಯ ಹಾಲನ್ನು ಬಿಡುತ್ತದೆ. ಇದರಿಂದ ತೊಗಟೆ ತೆಗೆಯುವವನ ಮೈ ಹಾಗೂ ಬಟ್ಟೆ ಮರದ ಹಾಲಿನಿಂದ ಹಾಳಾಗುತ್ತದೆ. ಹಿಂದಿನಿಂದ ಬಂದ ವಾಡಿಕೆಯ ಪ್ರಕಾರ ಈ ಮರದ ತೊಗಟೆಯನ್ನು ಬಟ್ಟೆ ಧರಿಸದೆ ಬರಿ ಮೈಯಲ್ಲಿ ತೆಗೆಯಬೇಕು..

ಕಷಾಯ ತಯಾರಿಕೆ:-
ಸಾಂಪ್ರದಾಯಿಕವಾಗಿ, ತುಳುನಾಡಿನ ಜನರು ಅಮಾವಾಸ್ಯೆಯ ಹಿಂದಿನ ದಿನ ಪಾಲೆಮರದ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸುತ್ತಾರೆ ಮತ್ತು ಮರವನ್ನು ಒಣ ಬಾಳೆ ಎಲೆಗಳನ್ನು ಹಗ್ಗದಿಂದ ಕಟ್ಟಿ ಮರದ ಕೆಳಗೆ ಕಲ್ಲು ಇಡುತ್ತಾರೆ. ಆದ್ದರಿಂದ, ಅವರು ಮುಂಜಾನೆ ಸುಲಭವಾಗಿ ಪಾಲೆ ಮಾರವನ್ನು ಗುರುತಿಸಬಹುದು.. ನಿಮ್ಮ ಚರ್ಮವನ್ನು ಪಡೆದ ನಂತರ ದಯವಿಟ್ಟು ಉತ್ತಮ ಆರೋಗ್ಯವನ್ನು ಆಶೀರ್ವದಿಸಿ” ಎಂದು ಮರದೊಂದಿಗೆ ಪ್ರಾರ್ಥಿಸಬಹುದು. ಇದು ಈ ಪ್ರದೇಶದಲ್ಲಿ ದೈವಿಕ ಸ್ಥಾನಮಾನವನ್ನು ಸಹ ಹೊಂದಿದೆ. ಆಟಿ ಅಮಾವಾಸೆಯ ದಿನದಂದು ಸೂರ್ಯೋದಯಕ್ಕೆ ಮುಂಚೆ ಪಾಲೆ ಮರದ ಚರ್ಮವನ್ನು ಕಲ್ಲು ಮತ್ತು ಅದರಿಂದ ತಯಾರಿಸಿದ ಕಷಾಯದ ಸಹಾಯದಿಂದ ಸಂಗ್ರಹಿಸಬೇಕು. ಮರವನ್ನು ಗುರುತಿಸುವಲ್ಲಿ ವಿಶೇಷ ಕಾಳಜಿ ವಹಿಸಬೇಕು. ಕಷಾಯ ಮಾಡಲು ತುಂಬಾ ಹೊರಗಿನ ಚರ್ಮವನ್ನು ತೆಗೆಯಲಾಗುತ್ತದೆ ಮತ್ತು ಒಳಗಿನ ಬಿಳಿ ಭಾಗವನ್ನು ಸ್ವಲ್ಪ ನೀರು ಸೇರಿಸಿ ಪುಡಿಮಾಡಲಾಗುತ್ತದೆ. ಮರದ ತೊಗಟೆಯನ್ನು ಕಲ್ಲು ಬಳಸಿ ಪುಡಿಮಾಡಲಾಗುತ್ತದೆ. ಮತ್ತು ಈ ಆಯುರ್ವೇದ ಮಿಶ್ರಣವನ್ನು ಕಾಳುಮೆಣಸು, ಅರಿಶಿನ, ಅಜವೈನ್, ಬೆಳ್ಳುಳ್ಳಿ ಪದಾರ್ಥಗಳನ್ನು ಮಿಶ್ರಣ ಮಾಡಿ ಒಂದು ಬೆಣಚುಕಲ್ಲು ಅಥವಾ ಕಬ್ಬಿಣದ ಬಾರ್ ಅನ್ನು ಬಿಸಿಮಾಡಿ ಕಷಾಯದಲ್ಲಿ ಇರಿಸಿ ನಂತರ ಚೆನ್ನಾಗಿ ಕುದಿಸಿ ತಯಾರು ಮಾಡುತ್ತಾರೆ.

ಆಟಿ ಅಮವಾಸ್ಯೆದಂದು ಬಗೆ ಬಗೆಯ ತಿನಿಸುಗಳು:-
ಅರಿಶಿನ ಎಲೆಯಲ್ಲಿ ತಯಾರಾದ ತಿಂಡಿ, ಹಪ್ಪಳ, ಕಡ್ಲೆ ಬೇಳೆ ಪಾಯಸ, ಎಳೆ ಬಿದಿರಿನ ಉಪ್ಪಿನಕಾಯಿ, ತಜಂಕ್ ಪಲ್ಯ, ಈ ಆಟಿ ತಿಂಗಳಲ್ಲಿ ತಯಾರಾಗುವ ವಿಶೇಷ ತಿನಿಸುಗಳು. ಆಟಿ ತಿಂಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕೃಷಿ ಕಾರ್ಯಗಳಿಗೆ ತೆರಳುವ ಮೊದಲು ತೆಂಗಿನ ಕಾಯಿ ಅಥವಾ ತಾರಾಯಿದ ಗಂಜಿ, ಕಾಯಿ ಹಾಲಿನ ಗಂಜಿ ಸೇವಿಸಿ ತೆರಳುವ ಪದ್ಧತಿ ಇಂದಿಗೂ ಇದೆ. ಮೂಡೆ, ಅರಸಿನ ಎಲೆಯ ಕಡುಬು, ಹಲಸಿನ ಕಡುಬು, ಪತ್ರೋಡೆ, ಕೆಸುವಿನ ಚಟ್ನಿ,ತಿಮರೆದ ಚಟ್ನಿ, ಮಾವಿನಕಾಯಿ ಚಟ್ನಿ, ಹುರುಳಿಸಾರು, ಚಿಲಿಂಬಿದ ಅಡ್ಡೆ, ಸೌತೆ ಪದಂಗಿ ಗಸಿ, ತಜಂಕ್ ವಡೆ, ಪಚ್ಚಿರ್ ಪಲ್ಯ, ಹಲಸಿನ ಮುಳ್ಕು, ಕಣಲೆ ಕಡ್ಲೆ, ತೇವು ಪದಪೆ(ಹರಿವೆ ಸೊಪ್ಪು)ನ ಗಸಿ, ಪಜಕಾಯಿ ಚಟ್ನಿ, ಮಾವಿನ ಹಣ್ಣಿನ ಮೆನಸ್ ಕಾಯಿಯ ರುಚಿ ಈ ಆಟಿ ತಿಂಗಳಲ್ಲಿ ಮಾತ್ರ ನೋಡಬಹುದಾಗಿದೆ..

Leave a Reply

Your email address will not be published. Required fields are marked *