ಉಡುಪಿ,(ಮಾಚ್ 20) : ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ನಾಲ್ಕು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 7 ಅಂಗನವಾಡಿ ಕಾರ್ಯಕರ್ತೆ ಮತ್ತು 27 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ
ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 16 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ಅ http://udupi.nic.in ಥವಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಉಡುಪಿ ದೂ.ಸಂ: 0820-2524055, ಬ್ರಹ್ಮಾವರ 0820-2562244, ಕುಂದಾಪುರ 08254-230807 ಹಾಗೂ ಕಾರ್ಕಳ ದೂ. ಸಂಖ್ಯೆ: 08258-230992 ಅನ್ನು ಸಂಪರ್ಕಿಸುವAತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.