ಉಡುಪಿ,(ಮಾರ್ಚ್ 6): ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಮಹಿಳಾ ದಿನಾಚರಣೆಯನ್ನು ಮಾರ್ಚ್ 8 ರಂದು ಬೆಳಗ್ಗೆ 9.30 ಕ್ಕೆ ಅಜ್ಜರಕಾಡು ರೆಡ್‌ಕ್ರಾಸ್ ಭವನದಲ್ಲಿ
ಆಚರಿಸಲಾಗುವುದು.
ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ ಉದ್ಘಾಟಿಸಲಿದ್ದು, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಸಭಾಪತಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.