ಉಡುಪಿ, (ಅಕ್ಟೋಬರ್ 16): ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗವು ಆನ್‍ಲೈನ್ ಕಂಪ್ಲೇಂಟ್ ಮ್ಯಾನೇಜ್‍ಮೆಂಟ್ ಸಿಸ್ಟಂನ್ನು ರೂಪಿಸಿದ್ದು, ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗಕ್ಕೆ ದೂರುಗಳನ್ನು  ದಾಖಲಿಸಬಹುದು ಮತ್ತು ಅರ್ಜಿದಾರರ ದೂರುಗಳ ಸ್ಥಿತಿ ಕುರಿತು ಮಾಹಿತಿಯನ್ನು ಪಡೆಯಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.