ಉಡುಪಿ (ಅಕ್ಟೋಬರ್, 5): ಜಿಲ್ಲೆಯಲ್ಲಿ ತೆರವಾಗಿರುವ ಫಾರ್ಮಸಿಸ್ಟ್ (23 ಹುದ್ದೆ) ಗಳನ್ನು ತಾತ್ಕಾಲಿಕವಾಗಿ ೪ ತಿಂಗಳ ಅವಧಿಗೆ ಅಥವಾ ನೇರ ನೇಮಕಾತಿ ಹುದ್ದೆಗಳು ಭರ್ತಿಯಾಗುವವರೆಗೆ, ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

     ಅರ್ಜಿ ನಮೂನೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಚೇರಿಯಿಂದ ಪಡೆದು, ಭರ್ತಿ ಮಾಡಿ, ಅಕ್ಟೋಬರ್ ೯ ರ ಒಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಚೇರಿ, ಅಜ್ಜರಕಾಡು, ಉಡುಪಿ ಜಿಲ್ಲಾ ಆಸ್ಪತ್ರೆ ಇವರಿಗೆ ಸಲ್ಲಿಸಬೇಕು. ಮತ್ತು ಅಕ್ಟೋಬರ್ ೧೨ ರಂದು ಬೆಳಗ್ಗೆ ೧೦.೩೦ ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ವಿದ್ಯಾರ್ಹತೆ ಮೂಲ ದಾಖಲೆ ಮತ್ತು ದೃಢೀಕೃತ ದಾಖಲೆಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಪ್ರಕಟಣೆ ತಿಳಿಸಿದೆ