ಇರಾ ಗ್ರಾಮ :  ಸಾರ್ವಜನಿಕ ಶಿಕ್ಷಣ ಇಲಾಖೆ, ದ.ಕ. ಜಿ. ಪಂ ಹಿ ಪ್ರಾ ಶಾಲೆ ಇರಾ ಪರಪ್ಪು  ಮತ್ತು ಇರಾ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅನುದಾನದಿಂದ ನಿರ್ಮಾಣಗೊಳ್ಳುವ ರಂಗಮಂದಿರಕ್ಕೆ ಮಂಗಳೂರು ಕ್ಷೇತ್ರದ ಶಾಸಕರಾದ ಯು ಟಿ ಖಾದರ್ ಇವರು ದ ಕ ಜಿ ಪಂ ಹಿ ಪ್ರಾ ಶಾಲೆ ಇರಾಪರಪ್ಪು ಇಲ್ಲಿ ಶಿಲಾನ್ಯಾಸವನ್ನು ನೆರವೇರಿಸಿದರು .

ಶಿಲಾನ್ಯಾಸವನ್ನು ನೆರವೇರಿಸಿ ಮಾತನಾಡಿದ ಯು ಟಿ ಖಾದರ್ ಇವರು ಕ್ಷೇತ್ರದ ಮೂಲ ಸೌಕರ್ಯಗಳ ಅಭಿವೃದ್ಧಿಗೆ ನಾನು ಹೆಚ್ಚು ಒತ್ತು ನೀಡುತ್ತಿದ್ದೇನೆ .ಇರಾ ಗ್ರಾಮದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವಲ್ಲಿ ರಂಗಮಂದಿರವೂ ಕೂಡ ಸಹಕಾರಿಯಾಗಲಿದೆ ಎಂದು ತಿಳಿಸಿ ಶಾಲಾ ಮಕ್ಕಳಿಗೆ ಶುಭ ಹಾರೈಸಿ, ಬಡವನಾಗಿ ಹುಟ್ಟಿದರೂ ಬಡವನಾಗಿಯೇ ಸಾಯಬೇಕಿಲ್ಲ. ಉತ್ತಮ ಶಿಕ್ಷಣವನ್ನು ಪಡೆದು ವಿದ್ಯಾವಂತರಾಗಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕುರ್ನಾಡು ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯರಾಗಿರುವ ಮಮತಾ ಗಟ್ಟಿ ಬಂಟ್ವಾಳ ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ   ಚಂದ್ರಹಾಸ  ಕರ್ಕೇರಾ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ    ಅಬ್ದುಲ್ ರಝಾಕ್ ಕುಕ್ಕಾಜೆ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸೈಯದ್ ಪಿ ಎಂ, ಗ್ರಾಮ ಪಂಚಾಯತ್  ಸದಸ್ಯರುಗಳಾದ ಎಂ.ಬಿ ಉಮ್ಮರ್, ಮತ್ತು ಮೊಯ್ದಿನ್ , ಪಂಚಾಯತ ಅಭಿವೃದ್ಧಿ ಅಧಿಕಾರಿಯಾದ ನಳಿನಿ, ಶಾಲಾ ಮುಖ್ಯ ಶಿಕ್ಷಕಿ ಪ್ರಸನ್ನ ವಿ ಉಪಸ್ಥಿತರಿದ್ದರು. ಸಹ ಶಿಕ್ಷಕರು ಕಾರ್ಯಕ್ರಮಕ್ಕೆ ಸಹಕರಿಸಿದರು. ಶಾಲಾ ವಿದ್ಯಾರ್ಥಿಗಳು, ಪೋಷಕರು ಮತ್ತು ಊರಿನ ಹಿರಿಯರು, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.