ಉಜಿರೆ: ಸ್ವಯಂ ಸೇವಕರುಧೈರ್ಯ, ತ್ಯಾಗ, ಆತ್ಮವಿಶ್ವಾಸ ಮತ್ತು ಸೇವಾ ಮನೋಭಾವ ಹೊಂದಿದ್ದು, ಸ್ವಯಂ ಸ್ಪೂರ್ತಿಯಿಂದರಕ್ಷಣಾಕಾರ್ಯಕ್ಕೆ ಸದಾ ಬದ್ಧರಾಗಿರಬೇಕು ಹಾಗೂ ಸಿದ್ಧರಾಗಿರಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯಆಶ್ರಯದಲ್ಲಿ ಸರ್ಕಾರದರಾಷ್ಟ್ರೀಯ ವಿಪತ್ತು ನಿರ್ವಹಣಾಘಟಕದ ಸಹಭಾಗಿತ್ವದಲ್ಲಿ ಧರ್ಮಸ್ಥಳದಲ್ಲಿ ಸೋಮವಾರ ಆಯೋಜಿಸಿದ ವಿಪತ್ತು ನಿರ್ವಹಣೆಕಾರ್ಯಕ್ರಮದ ಲೋಕಾರ್ಪಣೆ ಮತ್ತು ಸ್ವಯಂ ಸೇವಕರತರಬೇತಿಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿಪತ್ತಿನ ಸಂದರ್ಭದಲ್ಲಿ ಸ್ವಯಂ ಸೇವಕರುತಕ್ಷಣ ಸ್ಪಂದಿಸಬೇಕು.ಮೊದಲು ತಮ್ಮನ್ನುತಾವು ರಕ್ಷಣೆ ಮಾಡಿಕೊಂಡು ಬಳಿಕ ಇತರರರಕ್ಷಣೆಗೆ ನೆರವಾಗಬೇಕು.ಪ್ರಜ್ಞಾವಂತರಾಗಿ ತಾವೂ ಬದುಕಿ, ಇತರರೂ ಬದುಕಲು ನೆರವಾಗುವುದು ಮಾನವ ಧರ್ಮವಾಗಿದೆ.ಆಪತ್ತು ನಿರ್ವಹಣೆ ಮಾಡಲು ಸಾಮಾಜಿಕ ಹೊಣೆಗಾರಿಕೆಯಾಗಿದ್ದು, ವೈಜ್ಞಾನಿಕವಾಗಿ ಶಿಸ್ತು ಬದ್ಧವಾಗಿ ವಿಪತ್ತು ನಿರ್ವಹಣೆ ಸ್ವಯಂ ಸೇವಕರಿಗೆ ಮಾಹಿತಿ, ಮಾರ್ಗದರ್ಶನ ಹಾಗೂ ತರಬೇತಿಯ ಅಗತ್ಯವಾಗಿದೆ.ರಕ್ಷಣಾ ಪರಿಕರಗಳ ಸಮರ್ಪಕ ಬಳಕೆ ಬಗ್ಯೆಯೂ ಅವರಿಗೆ ಮಾಹಿತಿ ನೀಡಲಾಗುವುದು. ಸ್ವಯಂ ಸೇವಕರುತಮ್ಮ ಮನೆಯವರಿಗೂ, ನೆರೆಕರೆಯವರಿಗೂ ವಿಪತ್ತು ನಿರ್ವಹಣೆ ಬಗ್ಯೆ ಸೂಕ್ತ ಮಾಹಿತಿ, ಮಾರ್ಗದರ್ಶನ ನೀಡಬೇಕುಎಂದು ಹೆಗ್ಗಡೆಯವರು ಸಲಹೆ ನೀಡಿದರು.

    ರಾಜ್ಯದ 55 ಸೂಕ್ಷ್ಮ ಪ್ರದೇಶಗಳಲ್ಲಿ ವಿಪತ್ತು ನಿರ್ವಹಣೆಗಾಗಿ ಸ್ವಯಂ ಸೇವಕರ ತಂಡಗಳನ್ನು ರಚಿಸಲಾಗುವುದು. ಬೆಳ್ತಂಗಡಿ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಮಾತನಾಡಿ, ಸೂಕ್ತ ತರಬೇತಿಯಿಂದ ಸ್ವಯಂ ಸೇವಕರು ಉತ್ತಮ ರೀತಿಯ ಸೇವೆ ನೀಡಲು ಅನುಕೂಲವಾಗುತ್ತದೆ ಎಂದು ಹೇಳಿ ಶುಭ ಹಾರೈಸಿದರು. ಸರ್ಕಾರದ  ವಿವಿಧ ಕಾರ್ಯಕ್ರಮಗಳಿಗೆ ಧರ್ಮಸ್ಥಳದ ಕೊಡುಗೆ ಮತ್ತು ಸಹಕಾರವನ್ನುಧನ್ಯತೆಯಿಂದ ಅವರು ಸ್ಮರಿಸಿದರು.

ವಿಧಾನ ಪರಿಷತ್ ಸದಸ್ಯ ಕೆ. ಹರೀಶ್‍ಕುಮಾರ್ ಮಾತನಾಡಿ, ವಿಪತ್ತಿನ ಸಂದರ್ಭದಲ್ಲಿ ಸ್ವಯಂ ಸೇವಕರುಜನರ ಪ್ರಾಣ ಹಾಗೂ ಸಂಪತ್ತಿನರಕ್ಷಣೆಗೆಕಟಿಬದ್ಧರಾಗಿರಬೇಕುಎಂದು ಸಲಹೆ ನೀಡಿದರು.

ಡಿ. ಸುರೇಂದ್ರಕುಮಾರ್, ರಾಷ್ಟ್ರೀಯ ವಿಪತ್ತು ನಿರ್ವಹಣಾಘಟಕದ ಮುಖ್ಯಸ್ಥ ಗೋಪಾಲ್‍ಲಾಲ್ ಮೀನಾ, ಮಂಗಳೂರು ಘಟಕದ ಅಧಿಕಾರಿ ವಿಜಯಕುಮಾರ್ ಉಪಸ್ಥಿತರಿದ್ದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ  ಡಾ.ಎಲ್‍ಎಚ್.ಮಂಜುನಾಥ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.ನಿರ್ದೇಶಕ ಬೂದಪ್ಪ ಗೌಡಧನ್ಯವಾದವಿತ್ತರು.

ಮುಖ್ಯಾಂಶಗಳು:

•ವಿಪತ್ತು ನಿರ್ವಹಣೆಗಾಗಿರಾಜ್ಯದಲ್ಲಿ 55 ಸೂಕ್ಷ್ಮ ಪ್ರದೇಶಗಳಲ್ಲಿ ಸ್ವಯಂ ಸೇವಕರ ತಂಡಗಳನ್ನು ರಚಿಸಿ ತರಬೇತಿ ನೀಡಲಾಗುವುದು.

•ಪ್ರಥಮವಾಗಿ ಬೆಳ್ತಂಗಡಿ ತಾಲ್ಲೂಕಿನ 200 ಸ್ವಯಂ ಸೇವಕರತಂಡ ಸೋಮವಾರ ಧರ್ಮಸ್ಥಳದಲ್ಲಿ ಉದ್ಘಾಟನೆಗೊಂಡಿತು.

•ರಾಷ್ಟ್ರೀಯ ವಿಪತ್ತು ನಿರ್ವಹಣಾಘಟಕದ ಮುಖ್ಯಸ್ಥಗೋಪಾಲ್‍ಲಾಲ್ ಮೀನಾ ವಿಪತ್ತು ನಿರ್ವಹಣೆ ಹಾಗೂ ಪರಿಕರಗಳ  ಬಳಕೆ ಬಗ್ಯೆತರಬೇತಿ ನೀಡಿದರು.

•ತಮ್ಮನ್ನು ಮೊದಲುರಕ್ಷಣೆ ಮಾಡಿಕೊಂಡು ಬಳಿಕ ಇತರರರಕ್ಷಣೆ ಮಾಡಬೇಕು.

•ಸ್ವಯಂ ಸೇವಕರಿಗೆರಕ್ಷಣಾ ಪರಿಕರಗಳನ್ನು ವಿತರಿಸಲಾಯಿತು.

•ಸ್ವಯಂ ಸೇವಕರತಂಡಕೊಡೆಯಂತೆಆಪತ್ಕಾಲದಲ್ಲಿರಕ್ಷಣೆಗಾಗಿ

•ನೇತ್ರಾವತಿ ಸ್ನಾನಘಟ್ಟದಲ್ಲಿ ವಿಪತ್ತು ನಿರ್ವಹಣೆ ಬಗ್ಯೆ ಪ್ರಾತ್ಯಕ್ಷಿಕೆ ನಡೆಯಿತು.

ಯಾಂತ್ರೀಕೃತ ಕೃಷಿ ಪ್ರಾತ್ಯಕ್ಷಿಕೆ

ಉಜಿರೆ: ಧರ್ಮಸ್ಥಳದಲ್ಲಿ ಸಹ್ಯಾದ್ರಿ ವಸತಿಗೃಹದ ಬಳಿ ಹತ್ತುಎಕ್ರೆ ಪ್ರದೇಶದಲ್ಲಿ ಸೋಮವಾರಯಾಂತ್ರೀಕೃತ ಕೃಷಿ ಬಗ್ಯೆ ಪ್ರಾತ್ಯಕ್ಷಿಕೆ ನಡೆಯಿತು.ಕೂಲಿ ಕಾರ್ಮಿಕರ ಕೊರತೆ ಹಾಗೂ ಅಧಿಕ ವೆಚ್ಚದಿಂದಾಗಿರೈತರುಇಂದು ಭತ್ತದ ಕೃಷಿಯಿಂದ ವಿಮುಖರಾಗುತ್ತಿದ್ದು ಯಾಂತ್ರೀಕೃತ ಕೃಷಿಯಿಂದ ಅಧಿಕ ಇಳುವರಿ ಹಾಗೂ ಲಾಭ ಪಡೆಯಬಹುದು ಎಂದುರೈತರಿಗೆ ತಿಳುವಳಿಕೆ ನೀಡಲಾಯಿತು.ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಪ್ರಸಕ್ತ ವರ್ಷದಲ್ಲಿಒಂದು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಯಾಂತ್ರೀಕೃತ ಬೇಸಾಯ ಮಾಡಲು ಉದ್ದೇಶೀಸಲಾಗಿದೆ ಎಂದು ಯೋಜನೆಯ ಅಧಿಕಾರಿಗಳು ತಿಳಿಸಿದ್ದಾರೆ.