ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿ ಡಿಸೆಂಬರ್ 11 ರಿಂದ 14ರ ವರೆಗೆ ನಡೆಯುವ ದಕ್ಷಿಣ ವಲಯ ಪುರುಷರ ಅಂತರ್ ವಿಶ್ವವಿದ್ಯಾನಿಲಯ ಕಬಡ್ಡಿ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಶುಕ್ರವಾರ ಕಾಲೇಜಿನ ಸಭಾಂಗಣದಲ್ಲಿ ಶಾಸಕ ಕೆ. ರಘುಪತಿ ಭಟ್ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಕ್ರೀಡಾ ಕೂಟದ ಯಶಸ್ಸಿಗೆ ಪೂರ್ವಭಾವಿ ಸಭೆಯು ಶಾಸಕರ ಅಧ್ಯಕ್ಷತೆಯಲ್ಲಿ ನಡೆಯಿತು. ಕ್ರೀಡಾ ಕೂಟಕ್ಕೆ ಬೇಕಾಗುವ ವ್ಯವಸ್ಥೆಗಳು, ಸಮಿತಿಗಳು ಇತ್ಯಾದಿಗಳ ಬಗ್ಗೆ ವಿವರವಾಗಿ ಶಾಸಕರು ಭಾಗವಹಿಸಿದವರೊಂದಿಗೆ ಚರ್ಚಿಸಿ, ಕ್ರೀಡಾ ಕೂಟವನ್ನು ಅತ್ಯಂತ ಯಶಸ್ವಿಯಾಗಿ ನಡೆಸುವಂತೆ ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಜನಾರ್ದನ ತೋನ್ಸೆ, ಪ್ರಾಂಶುಪಾಲ ಬಾಲಕೃಷ್ಣ ಎಸ್. ಹೆಗ್ಡೆ, ಗ್ರಾಮಪಂಚಾಯತ್ ಅಧ್ಯಕ್ಷ ಕೃಷ್ಣ ಶೆಟ್ಟಿ, ದಕ್ಷಿಣ ಕನ್ನಡ, ಉಡುಪಿ ಜಿಲ್ಲಾ ಮೀನುಗಾರರ ಫೆಡರೇಶನ್ ಅಧ್ಯಕ್ಷ ಯಶಪಾಲ್ ಸುವರ್ಣ, ನಗರ ಸಭೆಯ ಸದಸ್ಯ ವಿಜಯ ಕೊಡವೂರು, ಮಂಗಳೂರು ವಿಶ್ವವಿದ್ಯಾನಿಲಯದ ಕ್ರೀಡಾ ನಿರ್ದೇಶಕ ಡಾ. ಕಿಶೋರ್ ಕುಮಾರ್ ಸಿ.ಕೆ., ಉಡುಪಿ ಜಿಲ್ಲಾ ಕಬಡ್ಡಿ ಅಸೋಸಿಯೇಶನ್‍ನ ಅಧ್ಯಕ್ಷ ರಾಜೇಂದ್ರ ಸುವರ್ಣ, ಕ್ರೀಡಾ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ದಯಾನಂದ ಶೆಟ್ಟಿ ಕೊಜಕುಳಿ, ರಾಘವೇಂದ್ರ ಕಿಣಿ, ಪ್ರಸಾದ್ ರಾವ್, ಮಂಜುಳಾ ಪ್ರಸಾದ್, ರಘುರಾಮ ಪುತ್ತೂರು, ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲ ಡಾ. ರಾಘವೇಂದ್ರ, ತೆಂಕನಿಡಿಯೂರು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಕರಬ, ತೆಂಕನಿಡಿಯೂರು ಹೈಸ್ಕೂಲ್‍ನ ಮುಖ್ಯೋಪಾಧ್ಯಾಯ ಸುಚೇತ, ಐ.ಕ್ಯೂ.ಎ.ಸಿ. ಸಂಚಾಲಕ ಡಾ. ಸುರೇಶ್ ರೈ ಕೆ, ದಕ್ಷಿಣ ಕನ್ನಡ ಪದವಿಪೂರ್ವ ಕಾಲೇಜಿನ ಕ್ರೀಡಾ ಸಂಚಾಲಕ ಪ್ರೇಮನಾಥ ಶೆಟ್ಟಿ ಕಾವೂ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ರಾಮಚಂದ್ರ ಪಾಟ್ಕರ್ ಸ್ವಾಗತಿಸಿದರು. ಉಪನ್ಯಾಸಕ ದಯಾನಂದ ಕುಮಾರ್ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.