ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇದರ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಘಟಕ ಉಡುಪಿ, ಜಿಲ್ಲಾ ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ, ಇವರ ಸಂಯುಕ್ತ ಆಶ್ರಯದಲ್ಲಿ ಮಾನವ ಹಕ್ಕು ಮತ್ತು ವಿಕಲ ಚೇತನರ ಕುರಿತು ಮಾಹಿತಿ ಕಾರ್ಯಕ್ರಮ ಸೋಮವಾರ ನಡೆಯಿತು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಬಸ್ರೂರು ರಾಜೀವ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ, ರೆಡ್ ಕ್ರಾಸ್ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.

ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಚಂದ್ರ ನಾಯ್ಕ್ ಸಂಪನ್ಮೂಲ ವ್ಯಕ್ತಿಯಾಗಿ ಮಾರ್ಗದರ್ಶನ ನೀಡಿದರು.