ಉಡುಪಿ: ಕೋವಿಡ್ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. ಭಾನುವಾರ ಒಂದೇ ದಿನ ಉಡುಪಿಯಲ್ಲಿ 134 ಹೊಸ ಪ್ರಕರಣಗಳು ದೃಢಪಟ್ಟಿವೆ, 349 ವರದಿಯು ನೆಗೆಟಿವ್‌ ಆಗಿದ್ದು, ಇನ್ನು ಕೂಡಾ 509 ಜನರ ಕೊರೊನಾ ಪರೀಕ್ಷಾ ವರದಿ ಬರಬೇಕಾಗಿದೆ. ಪ್ರಸ್ತುತ ಜಿಲ್ಲೆಯಲ್ಲಿ  584 ಸಕ್ರಿಯ ಪ್ರಕರಣಗಳಿವೆ. ಇಂದು 42 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.