ಉಡುಪಿ: ಜಿಲ್ಲಾ ಆಸ್ಪತ್ರೆ ಉಡುಪಿಯಲ್ಲಿ ಒಳರೋಗಿಯಾದ ದಾಖಲಾದ ಪ್ರಕಾಶ (62), ಜಗದೀಶ (47) ಮತ್ತು ಕುಮಾರ (60) ಎಂಬ ವ್ಯಕ್ತಿಗಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಮೃತ ವ್ಯಕ್ತಿಗಳ ವಾರಸುದಾರರು ಯಾರಾದರು ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0820-2520555 / 9449827833 ನ್ನು ಸಂಪರ್ಕಿಸುವಂತೆ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರ ಪ್ರಕಟಣೆ ತಿಳಿಸಿದೆ.