ಉಡುಪಿ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಇವರ ವತಿಯಿಂದ ಅವಿಭಜಿತ ಉಡುಪಿ ಮತ್ತು ದಕ್ಷಿಣ ಕನ್ನಡ ಅಂತರ್ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯ ಉದ್ಘಾಟನಾ ಸಮಾರಂಭವು ನವೆಂಬರ್ 19 ರಂದು ಬೆಳಗ್ಗೆ 9.30 ಕ್ಕೆ ಕಾರ್ಕಳ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಉದ್ಘಾಟಿಸಲಿದ್ದು, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆ ವಹಿಸಲಿದ್ದಾರೆ.