ಉಡುಪಿ,(ಸೆಪ್ಟೆಂಬರ್, 4):  ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ್ಸ್, ಸಿಖ್ಖ್, ಆಂಗ್ಲೋ ಇಂಡಿಯನ್ ಹಾಗೂ ಪಾರ್ಸಿ ಜನಾಂಗದ ವಿದ್ಯಾರ್ಥಿಗಳಿಗೆ  ಪ್ರಸ್ತುತ  ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ/ನೀಟ್‌ನಲ್ಲಿ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆಯಡಿಯಲ್ಲಿ ಸಾಲ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು  ಸೆಪ್ಟೆಂಬರ್ 18 ಕೊನೆಯ ದಿನವಾಗಿದೆ.

   ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ  ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ “ಮೌಲಾನಾ ಅಜಾದ್ ಭವನ” 1ನೇ ಮಹಡಿ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ಉಡುಪಿ ಇವರನ್ನು ಸಂಪರ್ಕಿಸಬಹುದು  ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.