ಉಡುಪಿ (ಅಕ್ಟೋಬರ್, 3): ಪ್ರಸ್ತುತ ಸಾಲಿನಲ್ಲಿ ಅಲೆಮಾರಿ/ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ ಬೈರಾಗಿ (ಬಾವ), ಬಾಲ ಸಂತೋಷಿ-ಜೋಷಿ, ಬಾಜಿಗರ್, ಭರಡಿ, ಬುಡಬುಡಕಿ-ಜೋಷಿ-ಗೋಂಧಳಿ, ಚಾರ, ಚಿತ್ರಕಥಿ-ಜೋಷಿ, ಧೋಲಿ, ಢವೇರಿ, ದೊಂಬರಿ, ಘಿಸಾಡಿ, ಗರುಡಿ, ಗೋಪಾಲ್, ಗೊಂದಳಿ, ಹೆಳವ, ಜೋಗಿ, ಕೇಲ್ಕರಿ, ಕೋಲ್ಹಟಿ, ನಂದಿವಾಲ-ಜೋಷಿ-ಗೊAದಳಿ, ಪುಲ್‌ಮಾಲ್ಲಿ, ನಾಥಪಂಥಿ-ಡೌರಿ-ಗೋಸಾವಿ, ನಿರ್ತಿಕಾರಿ, ಪಾಂಗ್ಯುಯಲ್, ಜೋಷಿ(ಸಾದ ಜೋಷಿ), ಸಾನ್ಸಿಯ, ಸರಾನಿಯ, ತಿರುಮಲಿ, ವಾಯ್ಡು, ವಾಸುದೇವ್, ಪಾಡಿ, ವಾಗ್ರಿ, ವಿರ್, ಬಜನಿಯ, ಶಿಕ್ಕಲಿಗರ್, ಗೊಲ್ಲ, ಕಿಲಿಕ್ಯಾತಸ್, ಸರೋಡಿ, ದುರ್ಗ-ಮುರ್ಗ(ಬುರ್‌ಬುರ್‌ಚ), ಹಾವಗಾರ್(ಹಾವಡಿಗಾರ್), ಪಿಚಗುಂಟಲ, ಮಸಣಿಯ ಯೋಗಿ, (ಬೆಸ್ತರ್) ಬುಂಡಬೆಸ್ತ, ಕಟಬು, ದರ್ವೇಶ್, ಕಾಶಿ, ಕಪಾಡಿ, ದೊಂಬಿದಾಸ ಮತ್ತು ಬೈಲ್‌ಪತರ್ ಜನರ ಆರ್ಥಿಕ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ, ಅರಿವು ಶೈಕ್ಷಣಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಭೂಖರೀದಿ ಯೋಜನೆ ಮತ್ತು ಬ್ಯಾಂಕುಗಳ ಸಹಯೋಗದೊಂದಿಗೆ ಸಾಲ ಮತ್ತು ಸಹಾಯಧನದ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.

    ಯೋಜನೆಯಲ್ಲಿ ಸೌಲಭ್ಯ ಪಡೆಯಲು ಇಚ್ಚಿಸುವವರು ಅರ್ಜಿ ನಮೂನೆಯನ್ನು ಜಿಲ್ಲಾ ಕಛೇರಿಯಲ್ಲಿ ಅಥವಾ ನಿಗಮದ ವೆಬ್‌ಸೈಟ್‌ನಲ್ಲಿ ಪಡೆದು ಅರ್ಜಿಯೊಂದಿಗೆ ಜಾತಿ ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಫೋಟೋವನ್ನು ಮತ್ತು ವಿದ್ಯಾರ್ಥಿಗಳ ವ್ಯಾಸಾಂಗದ ದಾಖಾಲಾತಿಗಳು, ಗಂಗಾ ಕಲ್ಯಾಣ ನೀರಾವರಿ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು, ಅರ್ಜಿದಾರರು ಹೊಂದಿರುವ ಜಮೀನಿನ ದಾಖಾಲಾತಿಗಳು ಸಣ್ಣ ಮತ್ತು ಅತಿ ಸಣ್ಣ ರೈತರ ಪ್ರಮಾಣ ಪತ್ರಗಳನ್ನು ಮತ್ತು ಭೂ ಖರೀದಿಗೆ ಸಂಬAಧಿಸಿದAತೆ ಜಮೀನುದಾರರ ಕಂದಾಯ ದಾಖಲೆಗಳನ್ನು ನಿಗಮದ ವೆಬ್‌ಸೈಟ್  http://www.dbcdc.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅಥವಾ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದಾಖಾಲಾತಿಗಳೊಂದಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಳ ಅಭಿವೃದ್ಧಿ ನಿಗಮ (ನಿ), ಉಡುಪಿ ಜಿಲ್ಲಾ ಕಛೇರಿಗೆ ಅಕ್ಟೋಬರ್ 29 ರ ಒಳಗೆ ಸಲ್ಲಿಸಬೇಕು.

   ಹೆಚ್ಚಿನ ಮಾಹಿತಿಗೆ ನಿಗಮದ ದೂರವಾಣಿ ಅಥವಾ ವೆಬ್‌ಸೈಟ್‌ನ್ನು ಸಂಪರ್ಕಿಸುವAತೆ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.