ಉಡುಪಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ( ಎನ್.ಸಿ.ಡಿ ಕ್ಲಿನಿಕ್ ಎನ್.ಟಿ.ಸಿ.ಪಿ ವಿಭಾಗ), ಜಿಲ್ಲಾ ಸರ್ವೇಕ್ಷಣಾ ಘಟಕ, ಸಮುದಾಯ ವೈದ್ಯಕೀಯ ವಿಭಾಗ ಕೆ.ಎಂ.ಸಿ ಮಣಿಪಾಲ ಮತ್ತು ಹಿರಿಯ ನಾಗರಿಕರ ಸಂಸ್ಥೆ ಉಡುಪಿ ಇವರ ಸಹಯೋಗದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಮತ್ತು ವಿಶ್ವ ಹೃದಯ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಅಕ್ಟೋಬರ್ 4 ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ರ ವರೆಗೆ ಜಿಲ್ಲಾ ಆಸ್ಪತ್ರೆಯ ಹಿರಿಯ ನಾಗರಿಕರ ವಾರ್ಡ್‍ನಲ್ಲಿ ಹಮ್ಮಿಕೊಳ್ಳಲಾಗಿದೆ.

ಉದ್ಘಾಟನಾ ಕಾರ್ಯಕ್ರಮವು 10.30 ಕ್ಕೆ ನಡೆಯಲಿದ್ದು, ಸಾರ್ವಜನಿಕರು ಮತ್ತು ಹಿರಿಯ ನಾಗರಿಕರು ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕರು ತಿಳಿಸಿದ್ದಾರೆ.