ಉಡುಪಿ (ಸೆಪ್ಟೆಂಬರ್, 2): ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಗ್ರಾಮೀಣ ಪ್ರದೇಶದಲ್ಲಿರುವ ಕುಶಲಕರ್ಮಿಗಳಿಗೆ ಜಿಲ್ಲಾ ಔದ್ಯಮಿಕ ಕೇಂದ್ರ/ವೃತ್ತಿಪರ ಯೋಜನೆಯಡಿ ವಿವಿಧ ಕಸುಬುಗಳಾದ ಗಾರೆಕೆಲಸ, ಮರಗೆಲಸ, ದೋಬಿ, ಕ್ಷೌರಿಕ, ಬ್ಯೂಟಿಪಾರ್ಲರ್, ಕಮ್ಮಾರಿಕೆ, ಪ್ಲಂಬರ್, ಹಾಗೂ ಟೈಲರಿಂಗ್ ವೃತ್ತಿಯ ಉಪಕರಣಗಳನ್ನು ಉಚಿತವಾಗಿ ನೀಡಲಾಗುವುದು.
ಉಪಕರಣಗಳನ್ನು ಪಡೆಯಲಿಚ್ಛಿಸುವ ಗ್ರಾಮೀಣ ಪ್ರದೇಶದ ಅರ್ಜಿದಾರರು ಅರ್ಜಿ ನಮೂನೆಯನ್ನು ಈ ಕಛೇರಿಯಿಂದ/ ಆಯಾಯ ಗ್ರಾಮ ಪಂಚಾಯತ್‌ಗಳಿoದ ಪಡೆದು ಸೆಪ್ಟೆಂಬರ್ 11 ರೊಳಗೆ ಉಪನಿರ್ದೇಶಕರು, ಗ್ರಾಮಾಂತರ ಕೈಗಾರಿಕೆ, “ಬಿ ಬ್ಲಾಕ್” ರೂಂ. ನಂ.207 ಮೊದಲನೇ ಮಹಡಿ ರಜತಾದ್ರಿ ಮಣಿಪಾಲ ಕಛೇರಿಗೆ ಸಲ್ಲಿಸುವಂತೆ ಗ್ರಾಮಾಂತರ ಕೈಗಾರಿಕೆ ಇಲಾಖೆಯ ಪ್ರಕಟಣೆ ತಿಳಿಸಿದೆ.