ಉಡುಪಿ,(ಆಗಸ್ಟ್,21):  ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಇಲಾಖೆ, ಬೆಂಗಳೂರು, ಸಿಡಾಕ್ ಧಾರವಾಡ ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮಂಗಳೂರು ಇವರು  ಜಂಟಿಯಾಗಿ ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್‍ನ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಆಯ್ದ 25 ನಿರುದ್ಯೋಗಿಗಳಿಗೆ 6 ದಿನಗಳ ಉಚಿತ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಇದೇ ತಿಂಗಳ 24 ರಿಂದ 29 ರತನಕ ಹಮ್ಮಿಕೊಳ್ಳಲಾಗಿದೆ. 

 ಉದ್ಘಾಟನೆಯನ್ನು ಆಗಸ್ಟ್ 24 ರಂದು  ಪೂರ್ವಾಹ್ನ ಘಂಟೆ 10.30 ಕ್ಕೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ  ಮಟ್ಟಾರು ರತ್ನಾಕರ ಹೆಗ್ಡೆ ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ಉಡುಪಿ ಶಾಸಕರಾದ ರಘುಪತಿ ಭಟ್ ಹಾಗೂ ಉಡುಪಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯವರು ಭಾಗವಹಿಸಲಿದ್ದಾರೆ ಹಾಗೂ ಇಲಾಖೆ ಮತ್ತು  ಸಿಡಾಕ್‍ನ ಜಿಲ್ಲಾ ಜಂಟಿ ನಿರ್ದೇಶಕರಾದ  ಅರವಿಂದ ಬಾಳೇರಿ ಮತ್ತು ಅಧಿಕಾರಿಗಳು ಭಾಗವಹಿಸಲಿರುವರೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.