ಉಡುಪಿ,(ಸೆಪ್ಟೆಂಬರ್, 2):  ಉಡುಪಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ವತಿಯಿಂದ 2016, 17 ಮತ್ತು 2018ರ ಸಾಲಿನಲ್ಲಿ  ಎನ್.ಎಂ.ಎo.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು , ವಿದ್ಯಾರ್ಥಿವೇತನ ಪಡೆಯಲು ನವೀಕರಣ ಮಾಡಿಕೊಳ್ಳುವುದು. ಹಾಗೆಯೇ 2019 ನವೆಂಬರ್‌ನಲ್ಲಿ ಪರೀಕ್ಷೆ ಬರೆದು ಉತ್ತೀರ್ಣರಾದ ವಿದ್ಯಾರ್ಥಿಗಳು ಹೊಸದಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಬೇಕಾಗಿರುತ್ತದೆ.

ನೋಂದಾಣಿ ಮತ್ತು ನವೀಕರಣ ಮಾಡಿಕೊಳ್ಳಲು ಅಕ್ಟೋಬರ್ 31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ  ವಿದ್ಯಾರ್ಥಿಗಳು ತಾವು ಕಲಿಯುತ್ತಿರುವ ಸಂಸ್ಥೆಯ ಮುಖ್ಯಸ್ಥರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಎನ್.ಎಂ.ಎo.ಎಸ್ ಅಧಿಕಾರಿ ಅಥವಾ ಜಿಲ್ಲಾ ನೋಡಲ್ ಅಧಿಕಾರಿ ಚಂದ್ರನಾಯ್ಕ್ ಉಪನ್ಯಾಸಕರು ಡಯಟ್ ಉಡುಪಿ ಮೊ.ನಂ: 9380241292 ಅವರನ್ನು ಸಂಪರ್ಕಿಸುವoತೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.