ಉಡುಪಿ (ಜೂನ್ 23): ಹಲವಾರು ಆತಂಕಗಳ ನಡುವೆ ರಾಜ್ಯ ಸರಕಾರ ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ನಡೆಸುವ ಕುರಿತು ತೀರ್ಮಾನ ಕೈಗೊಂಡಿದ್ದು , ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಇವರು ಜಿಲ್ಲೆಯ  ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಸರಕಾರದ ಕೋವಿಡ್ 19 ಮಾರ್ಗಸೂಚಿಯಂತೆ ಪರೀಕ್ಷಾ ಕೇಂದ್ರದಲ್ಲಿ ತೆಗೆದುಕೊಂಡ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.

    ಪರೀಕ್ಷಾ ಕೇಂದ್ರಗಳ ಸ್ಯಾನಿಟೈಸಿಂಗ್, ಮಾರ್ಕಿಂಗ್, ಕೊಠಡಿಗಳ ಸ್ವಚ್ಛತೆ ಬಗ್ಗೆ ಪರಿಶೀಲಿಸಿ  ಮುಖ್ಯವಾಗಿ ಶೌಚಾಲಯದ ಸ್ವಚ್ಛತೆ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಎಲ್ಲಾ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಿಗೆ ನಿರ್ದೇಶಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ತಿಳಿಸಿದರು.

   ಪೋಷಕರು ಕೂಡಾ   ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಿ ವಿದ್ಯಾರ್ಥಿಗಳ ಬಗ್ಗೆ ಜಾಗೃತೆ ವಹಿಸುವಂತೆ ತಿಳಿಸಿದರು. 

      ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಳಿ,  ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸುಮಿತ್ ಶೆಟ್ಟಿ ಕೌಡೂರು, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಶೋಭಾ ಜಿ ಪುತ್ರನ್, ಜಿಲ್ಲಾ ಪಂಚಾಯತ್ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ, ಗೀತಾಂಜಲಿ ಎಂ ಸುವರ್ಣ,  ರೇಷ್ಮಾ ಉದಯ ಶೆಟ್ಟಿ,  ಡಿಡಿಪಿಯ ಶೇಷ ಶಯನ ಕಾರಿಂಜ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.