ಉಡುಪಿ: ಜಿಲ್ಲೆಯಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಕಲ್ಲು ಗಣಿ ಗುತ್ತಿಗೆದಾರರಿಗೆ ಹಾಗೂ ಈಗಾಗಲೇ ಅವಧಿ ಮುಗಿದಿರುವ ಈ ಹಿಂದೆ ನಿರ್ವಹಿಸಿದ ಕಲ್ಲು ಗಣಿಗುತ್ತಿಗೆದಾರರಿಗೂ ಸಹ ಕಲ್ಲು ಕೋರೆಗಳ ಸುತ್ತಲೂ ತಂತಿ ಬೇಲಿ ಅಳವಡಿಸಿ “ಅಪಾಯ ಪ್ರದೇಶ” ಎಂಬ ಎಚ್ಚರಿಕೆಯ ಸೂಚನಾ ಫಲಕವನ್ನು ಅಳಡಿಸಲು ಸೂಚಿಸಿದೆ. ಆದಾಗ್ಯೂ ಚಾಲ್ತಿ/ಅವಧಿ ಮುಗಿದಿರುವ ಕಲ್ಲು ಗಣಿಗುತ್ತಿಗೆ ಪ್ರದೇಶಗಳಲ್ಲಿ ಅವಘಡಗಳು ಸಂಭವಿಸಿದ್ದಲ್ಲಿ ಸಂಬoಧಿಸಿದವರ ಗುತ್ತಿಗೆದಾರರು/ಪಟ್ಟಾ ಮಾಲೀಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು.

   ಮಳೆಗಾಲದಲ್ಲಿ ಜಿಲ್ಲೆಯ ಕಲ್ಲು ಕೋರೆಗಳು ಹಾಗೂ ಈ ಹಿಂದೆ ನಿರ್ವಹಿಸಿದ ಕಲ್ಲು ಕೋರೆ ಗುಂಡಿಗಳಲ್ಲಿ ನೀರು ಸಂಗ್ರಹವಾಗುವುದು ಸಹಜವಾಗಿರುತ್ತದೆ. ಆದ್ದರಿಂದ ನೀರು ತುಂಬಿರುವ ಕಲ್ಲು ಕೋರೆ ಗುಂಡಿಗಳ ಬಳಿ , ಮಹಿಳೆಯರು, ಮಕ್ಕಳು ಮತ್ತು ಸಾರ್ವಜನಿಕರು ತೆರಳದೇ, ಜಾಗ್ರತೆವಹಿಸುವಂತೆ , ಹಿರಿಯ ಭೂವಿಜ್ಞಾನಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಉಡುಪಿ  ಅವರ ಪ್ರಕಟಣೆ ತಿಳಿಸಿದೆ.