ಉಡುಪಿ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಇವರ ವತಿಯಿಂದ ಕಾರ್ಕಳ ತಾಲೂಕು ಈಜು ಕೊಳದ ಉದ್ಘಾಟನಾ ಸಮಾರಂಭವು ನವೆಂಬರ್ 18 ರಂದು ಮಧ್ಯಾಹ್ನ 2.30 ಕ್ಕೆ ಕಾರ್ಕಳ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಕಾರ್ಕಳ ಶಾಸಕ ಸುನೀಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.