ಉಡುಪಿ (ಅಕ್ಟೋಬರ್22): ಜಿಲ್ಲೆಯ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ಕಿರಿಯ ಮಹಿಳಾ ಸಹಾಯಕಿಯರ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ೫ ತಿಂಗಳ ಅವಧಿಗೆ ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಕಿರಿಯ ಮಹಿಳಾ ಆರೋಗ್ಯ ತರಬೇತಿ ಪಡೆದು ಕರ್ನಾಟಕ ನರ್ಸಿಂಗ್ ಕೌನ್ಸಿಲ್‌ನಲ್ಲಿ ನೋಂದಣಿ ಮಾಡಿದವರು ನವೆಂಬರ್ 2 ರ ಒಳಗೆ ಅರ್ಜಿ ಸಲ್ಲಿಸಬಹುದು.

    ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ಸಂಪರ್ಕಿಸುವoತೆ ಪ್ರಕಟಣೆ ತಿಳಿಸಿದೆ.