ಉಡುಪಿ, (ಅಕ್ಟೋಬರ್ 16): ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ನವದೆಹಲಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದ ಮೇರೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ನ್ಯಾಯಾಂಗ ಇಲಾಖೆ, ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ವಕೀಲರ ಸಂಘ (ರಿ) ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ “ಕೋವಿಡ್-19” ಕೊರೊನಾ ರೋಗ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ಜನಾಂದೋಲನ ಜಾಗೃತಿ ಮಾಹಿತಿ ಕಾರ್ಯಕ್ರಮವು ಅಕ್ಟೋಬರ್ 17 ರಂದು ಬೆಳಗ್ಗೆ 9.45 ಕ್ಕೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆಯಲಿದೆ.

    ಕಾರ್ಯಕ್ರಮವನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜೆ.ಎನ್. ಸುಬ್ರಮಣ್ಯ ಉದ್ಘಾಟಿಸಲಿದ್ದು, ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ವೈ ಭಟ್, ಜಿಲ್ಲಾ ಕೇಂದ್ರಸ್ಥಾನದ ನ್ಯಾಯಾಧೀಶರುಗಳು ಉಪಸ್ಥಿತರಿರುವರು.

    ಸಮಾಜ ಕಲ್ಯಾಣ ಇಲಾಖಾ ವತಿಯಿಂದ “ನನ್ನ ಕುಟುಂಬ ನನ್ನ ಜವಾಬ್ದಾರಿ” ಮಾಹಿತಿ ಪತ್ರ ಬಿಡುಗಡೆ ಮಾಡಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.