ಉಡುಪಿ,(ಜನವರಿ 15) : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ಕಚ್ಚೂರು ಶ್ರೀ ಮಾಲ್ತಿದೇವಿ ದೇವಸ್ಥಾನ ಶ್ರೀ ಬಬ್ಬುಸ್ವಾಮಿ ಮೂಲಕ್ಷೇತ್ರ ಸಮಿತಿ ಬಾರಕೂರು ಬ್ರಹ್ಮಾವರ ತಾಲೂಕು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಜನಪರ ಉತ್ಸವ- ವಿಶೇಷ  ಘಟಕ ಯೋಜನೆಯಡಿ ಜಾನಪದ ಕಲಾತಂಡಗಳ ಸಾಂಸ್ಕೃತಿಕ ಕಾರ್ಯಕ್ರಮವು ಜನವರಿ 17 ರಂದು ಮಧ್ಯಾಹ್ನ 3 ಗಂಟೆಗೆ ಬಾರಕೂರಿನ ಕಚ್ಚೂರು ಶ್ರೀ ಮಾಲ್ತಿದೇವಿ ದೇವಸ್ಥಾನ, ಶ್ರೀ ಬಬ್ಬುಸ್ವಾಮಿ ಮೂಲಕ್ಷೇತ್ರ ಇಲ್ಲಿ ನಡೆಯಲಿದೆ.

    ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮದಲ್ಲಿ ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.