ಉಡುಪಿ,(ಡಿಸೆಂಬರ್ 31) : ಜಿಲ್ಲಾಡಳಿತ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಜಿಲ್ಲಾ ವಾರ್ತಾ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ, ಬಳಕೆದಾರರ ವೇದಿಕೆ ಹಾಗೂ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆಯು ಜನವರಿ 5 ರಂದು ಬೆಳಗ್ಗೆ 10.30 ಕ್ಕೆ ಉಡುಪಿ ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ರಾಜ್ಯದ ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಮೀನುಗಾರಿಕೆ ಮತ್ತು ಬಂದರು ಹಾಗೂ ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.