ಉಡುಪಿ : ವಿಶ್ವ ಪರಿಸರ ದಿನಾಚರಣೆ ಅಂಗವಾಗಿ “ಜೀವ ವೈವಿಧ್ಯತೆ” ಎಂಬ ಘೋಷಣೆಯೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆವರಣದಲ್ಲಿ ,ಡಿ ಹೆಚ್ ‌ಓ ಡಾ. ಸುಧೀರ್ ಚಂದ್ರ ಸೂಡಾ ಗಿಡ ನೆಟ್ಟು, ಮುಂದಿನ ಪೀಳಿಗೆಗಾಗಿ ಪರಿಸರವನ್ನು ರಕ್ಷಿಸಿ, ಪೋಷಿಸುವುದು ಎಲ್ಲರ ಜವಾಬ್ದಾರಿ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀರಾಮ ರಾವ್, ಆರ್.ಸಿ.ಹೆಚ್. ಅಧಿಕಾರಿ ಡಾ. ಎಂ.ಜಿ.ರಾಮ, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಚಿದಾನಂದ ಸಂಜು, ಕೋವಿಡ್ ಕಾಲ್ ಸೆಂಟರ್ ಅಧಿಕಾರಿ ಡಾ. ಪ್ರೇಮಾನಂದ್, ಮನೋವೈದ್ಯ ಡಾ. ಮಾನಸ್, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ವಿಜಯಾಬಾಯಿ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರೀತಮ್, ಲೆಕ್ಕಪತ್ರ ವ್ಯವಸ್ಥಾಪಕ ಗಿರೀಶ್ ಕಡ್ಡೀಪುಡಿ, ಜಿಲ್ಲಾ ಸಲಹೆಗಾರ ಗುರುರಾಜ್ ಹಾಗೂ ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.