ಉಡುಪಿ, (ನವೆಂಬರ್ 2) : ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವ ಜಗದೀಶ ಶೆಟ್ಟರ್, ನವೆಂಬರ್ 6 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಮಧ್ಯಾಹ್ನ 12 ಗಂಟೆಗೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೈಗಾರಿಕಾ ಅಧಿಕಾರಿಗಳು ಹಾಗೂ ಕೈಗಾರಿಕೋದ್ಯಮಿಗಳೊಂದಿಗೆ ಸಭೆ ನಡೆಸಿ , ನಂತರ ಮಂಗಳೂರಿಗೆ ತೆರಳುವರು.
