ಉಡುಪಿ (ಸೆಪ್ಟೆಂಬರ್, 28): ರಾಜ್ಯದ ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೆಪ್ಟಂಬರ್ 29 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 7 ಗಂಟೆಗೆ ಕೋಟ ಡಾ. ಶಿವರಾಮ ಕಾರಂತ ಥೀಂ ಪಾರ್ಕ್ನಲ್ಲಿ ಸಾರ್ವಜನಿಕ ಭೇಟಿ ಮತ್ತು ಅಹವಾಲು ಸ್ವೀಕಾರ, 10 ಕ್ಕೆ ಕಾರ್ಕಳ ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ ಸಾರ್ವಜನಿಕ ಭೇಟಿ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಕೋಟದಲ್ಲಿ ವಾಸ್ತವ್ಯ ಮಾಡುವರು
