ಉಡುಪಿ: ಲೋಕಾಯುಕ್ತ ಜಸ್ಟೀಸ್ ಪಿ.ವಿಶ್ವನಾಥ ಶೆಟ್ಟಿ ಅವರು ನವೆಂಬರ್ 22 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 9 ಕ್ಕೆ ಉಡುಪಿ ಸಕ್ರ್ಯೂಟ್ ಹೌಸ್ನಲ್ಲಿ ಉಡುಪಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ, 10.15 ಕ್ಕೆ ಕುಂಜಿಬೆಟ್ಟು ವೈಕುಂಠ ಬಾಳಿಗಾ ಲಾ ಕಾಲೇಜಿನಲ್ಲಿ ಹೊಸ ಗ್ರಂಥಾಲಯ ಕಟ್ಟಡದ ಉದ್ಘಾಟನೆ, 11.30 ಕ್ಕೆ ಬಿ.ಸಿ.ಎಂ. ಹಾಸ್ಟೆಲ್, ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್, ಅಂಗನವಾಡಿ ಕೇಂದ್ರ, ಜಿಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ, ಮಧ್ಯಾಹ್ನ 3 ಕ್ಕೆ ಜಿಲ್ಲಾ ಪಂಚಾಯತ್ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ತೆರಳುವರು.