ಉಡುಪಿ:  ಅಂತರಾಷ್ಟ್ರೀಯ ಕಾರ್ಮಿಕರ ಸಂಘಟನೆಯ ನಿರ್ಣಯದನ್ವಯ ವಿಶ್ವದಾದ್ಯಂತ ಜೂನ್ 12ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಆಯೋಜಿಸಲಾಗಿದೆ.

     ಈ ಮೂಲಕ ವಿಶ್ವದಾದ್ಯಂತ ಜೂನ್ 12ರಂದು ಬಾಲಕಾರ್ಮಿಕತೆಯ ಬಗ್ಗೆ ಜನರಿಗೆ ಅರಿವು ಮೂಡಿಸಲು ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆ ವಿಶೇಷವಾಗಿ “ಕೋವಿಡ್-19: ಮಕ್ಕಳನ್ನು ಬಾಲಕಾರ್ಮಿಕತೆಯಿಂದ ರಕ್ಷಿಸಲು ಹಿಂದೆoದಿಗಿoತಲೂ ಹೆಚ್ಚು ಶ್ರಮಿಸುವ ಆಶಯವನ್ನು ಹೊಂದಿದೆ.

    ಕೋವಿಡ್-19 ಇದು ಒಂದು ಸಾಂಕ್ರಾಮಿಕ ರೋಗವಾಗಿದ್ದು, ಇದರ ಪರಿಣಾಮವಾಗಿ ಆರ್ಥಿಕ ಮತ್ತು ಕಾರ್ಮಿಕ ಮಾರುಕಟ್ಟೆಯ ಆಘಾತವು ಜನರ ಜೀವನ ಹಾಗೂ ಜೀವನೋಪಾಯದ ಮೇಲೆ ಭಾರಿ ಪರಿಣಾಮ ಬೀರುತ್ತಿದೆ. ಈ ಬಿಕ್ಕಟ್ಟು ಸಾವಿರರು ದುರ್ಬಲ ಮಕ್ಕಳನ್ನು ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಪದ್ಧತಿಗೆ ತಳ್ಳಬಹುದಾಗಿದೆ. ಮಕ್ಕಳನ್ನು ಕಷ್ಟಕರವಾದ ಮತ್ತು ಹೆಚ್ಚು ಸಮಯ ಕೆಲಸ ಮಾಡುವ ಸಂದರ್ಭಗಳನ್ನು ಎದುರಿಸುವ ಅಪಾಯ ಒದಗುವ ಸಾಧ್ಯತೆ ಇರುವುದರಿಂದ, ಬಾಲಕಾರ್ಮಿಕ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ 1986ರ ಉಲ್ಲಂಘನೆ ಶಿಕ್ಷಾರ್ಹ ಅಪರಾಧ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಯಾವುದೇ ವೃತ್ತಿ ಮತ್ತು ಪ್ರಕ್ರಿಯೆಗಳಲ್ಲಿ ಕೆಲಸಕ್ಕೆ ನೇಮಕ ಮಡಿಕೊಳ್ಳುವುದು ಮತ್ತು ಅವಕಾಶ ಕಲ್ಪಿಸಿಕೊಡುವುದು ನಿಷೇಧಿಸಲ್ಪಟ್ಟಿದೆ. 14 ರಿಂದ 18 ವರ್ಷದೊಳಗಿನ ಕಿಶೋರಾವಸ್ಥೆಯ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ನೇಮಿಸಿಕೊಳ್ಳುವುದನ್ನು ನಿಷೇಧಿಸಲ್ಪಟ್ಟಿದೆ. ಕೆಲಸಕ್ಕೆ ನೇಮಿಸಿಕೊಂಡಲ್ಲಿ ಮಾಲೀಕರಿಗೆ 6 ತಿಂಗಳುಗಳಿಗೆ ಕಡಿಮೆ ಇಲ್ಲದಂತೆ 2 ವರ್ಷದವರೆಗೆ ಜೈಲು ಶಿಕ್ಷೆ, ಕನಿಷ್ಠ ರೂ. 20,000/ ದಿಂದ ಗರಿಷ್ಠ ರೂ.50,000/-ದವರೆಗೆ ದಂಡ ಅಥವಾ ಎರಡನ್ನು ವಿಧಿಸಲಾಗುವುದು.

      ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರನ್ನು ಕೆಲಸಕ್ಕೆ ನೇಮಕವಾಗದಂತೆ ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಜೂನ್ 12, ಶುಕ್ರವಾರದಂದು ಜಿಲ್ಲಾಡಳಿತ ಉಡುಪಿ ಜಿಲ್ಲೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ಜಿಲ್ಲೆ, ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಬಾಲಕಾರ್ಮಿಕಯೋಜನಾ ಸಂಘ, ಉಡುಪಿ ಹಾಗೂ ಚೈಲ್ಡ್ಲೈನ್ ಉಡುಪಿ ಇದರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯಾದ್ಯಂತ ಆಟೋ ಜಾಥದ ಮೂಲಕ ಬಾಲಕಾರ್ಮಿಕ ಮತ್ತು ಕಿಶೋರಾವಸ್ಥೆಯ ಕಾರ್ಮಿಕರ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಪ್ರಚಾರ ಕರ‍್ಯವನ್ನು ಹಮ್ಮಿಕೊಳ್ಳಲಾಗಿದೆ. ಎಂದು ಕಾರ್ಮಿಕ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.