ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿ ಸೋಮವಾರ ಚುನಾವಣಾ ಸಾಕ್ಷರತಾ ಕ್ಲಬ್, ಜಿಲ್ಲಾ ಚುನಾವಣಾ ಆಯೋಗ, ಉಡುಪಿ ಜಿಲ್ಲಾ ಆಡಳಿತ, ತಾಲ್ಲೂಕು ಆಡಳಿತ, ತೆಂಕನಿಡಿಯೂರು ಗ್ರಾಮ ಪಂಚಾಯತ್ ಇವರ ಜಂಟಿ ಆಶ್ರಯದಲ್ಲಿ ಮತದಾರರ ಗುರುತಿನ ಚೀಟಿ ಪರಿಶೀಲನಾ, ಮತದಾರ ಪಟ್ಟಿಗೆ ಸೇರ್ಪಡೆ ಹಾಗೂ ತಿದ್ದುಪಡಿ ಮಾಹಿತಿ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಶಾಂತ್ ಶೆಟ್ಟಿ, ಚುನಾವಣಾ ಮಾಸ್ಟರ್ ಟ್ರೈನರ್ ವಿದ್ಯಾರ್ಥಿಗಳಿಗೆ ಮತದಾರರ ಗುರುತಿನ ಚೀಟಿ ಪರಿಶೀಲನೆ ಹಾಗೂ ಸೇರ್ಪಡೆಯ ಕುರಿತು ಸಮಗ್ರ ಮಾಹಿತಿ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆ ಸಮಾರಂಭ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ “ಇದರ ಸದಪಯೋಗವನ್ನು ಪಡೆದು ವಿದ್ಯಾರ್ಥಿಗಳು ತಮ್ಮ ಮನೆ ಮತ್ತು ಸುತ್ತಮುತ್ತಲಿನ ಪರಿಸರದಲ್ಲಿ ಮಾಹಿತಿಯನ್ನು ನೀಡುವಂತೆ ಕೋರಿದರು.  

ಸಮಾರಂಭದಲ್ಲಿ ಉಡುಪಿ ತಾಲ್ಲೂಕು ಚುನಾವಣಾ ವಿಭಾಗದ ಎಫ್.ಡಿ.ಎ. ನಟರಾಜ್, ಶಶಿಕಿರಣ್ ಎಸ್.ಡಿ.ಎ. ಚುನಾವಣಾ ವಿಭಾಗ, ತೆಂಕನಿಡಿಯೂರು ಗ್ರಾಮಲೆಕ್ಕಿಗ ಜಗದೀಶ ಮತ್ತು ಇತರ ಚುನಾವಣಾ ಅಧಿಕಾರಿಗಳು ವಿದ್ಯಾರ್ಥಿಗಳ ಮತದಾರರ ಚೀಟಿ ಪರಿಶೀಲನೆ ನಡೆಸಿಕೊಟ್ಟರು.  

ಐ.ಕ್ಯೂ.ಎ.ಸಿ. ಸಂಚಾಲಕ ಡಾ. ಸುರೇಶ್ ರೈ ಕೆ. ಉಪಸ್ಥಿತರಿದ್ದರು.  ಚುನಾವಣಾ ಸಾಕ್ಷರತಾ ಉಪನ್ಯಾಸ ಸಂಚಾಲಕ ಪ್ರೊ. ಮಂಜುನಾಥ ಸ್ವಾಗತಿಸಿ, ವಂದಿಸಿದರು.