ಉಡುಪಿ:- ಸೆಪ್ಟೆಂಬರ್ 2020 ರಲ್ಲಿ ದಿನಾಂಕ: 07-09-2020 ರಿಂದ 19-09-2020 ರ ವರೆಗೆ ಬೆಳಿಗ್ಗೆ 10.45 ರಿಂದ 1.30 ಹಾಗೂ ಮಧ್ಯಾಹ್ನ 2.15 ರಿಂದ 5.30 ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯು ಉಡುಪಿ ಜಿಲ್ಲೆಯಲ್ಲಿ ಒಟ್ಟು 04 ಪರೀಕ್ಷಾ ಕೇಂದ್ರಗಳನ್ನು ಮಾಡಲಾಗಿದೆ. ಈ ಕೇಂದ್ರಗಳು 01) ಸರ್ಕಾರಿ ಪದವಿ ಪೂರ್ವ ಕಾಲೇಜು ಉಡುಪಿ. 2) ಎಂ.ಜಿ.ಎಂ. ಪದವಿ ಪೂರ್ವ ಕಾಲೇಜು ಉಡುಪಿ. 03) ಭುವನೇಂದ್ರ ಪದವಿ ಪೂರ್ವ ಕಾಲೇಜು ಕಾರ್ಕಳ 4) ಭಂಡಾರ್‌ಕಾರ್ ಪದವಿ ಪೂರ್ವ ಕಾಲೇಜು ಕುಂದಾಪುರ. ಈ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪೂರಕ ಪರೀಕ್ಷೆಯಲ್ಲಿ ಒಟ್ಟು 1718 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇವರಲ್ಲಿ 1104 ಬಾಲಕರು ಹಾಗೂ 614 ಬಾಲಕಿಯರು ಇರುತ್ತಾರೆ.

ಕೋವಿಡ್ 19 ರ ಹಿನ್ನಲೆಯಲ್ಲಿ ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಸ್ಕ್ಯಾನಿಟೈಸ್ ಮಾಡಲಾಗಿದೆ. ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರದ ಒಳಗೆ ಬಿಡುವ ಸಂದರ್ಭದಲ್ಲಿ ಥರ್ಮಲ್ ಸ್ವಾನರ್‌ನಿಂದ ಪರೀಕ್ಷಿಸಿ ಸ್ಯಾನಿಟೈಸ್ ಮಾಡಿಸಲಾಗುವುದು, ಮತ್ತು ಮಾಸ್ಕ್‌ಗಳನ್ನು ಕಡ್ಡಾಯವಾಗಿ ಧರಿಸುವುದು. ಕೊಠಡಿಗಳಲ್ಲಿ ಕನಿಷ್ಠ 03 ಅಡಿಗಳ ಅಂತರ ನೀಡಿ ಪ್ರತಿ ಕೊಠಡಿಯಲ್ಲಿ 24 ವಿದ್ಯಾರ್ಥಿಗಳು ಕುಳಿತುಕೊಂಡು ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆ ಪ್ರಾರಂಭ ಮತ್ತು ಮುಕ್ತಾಯದ ನಂತರ ವಿದ್ಯಾರ್ಥಿಗಳು ಗುಂಪುಗೂಡದಂತೆ ನಿಗಾವಹಿಸಲಾಗುವುದು.

ಯಾವುದಾದರೂ ವಿದ್ಯಾರ್ಥಿಗೆ ಜ್ವರ, ಶೀತ, ನೆಗಡಿ, ಕೆಮ್ಮು ಮತ್ತು ಹೋಮ್ ಕ್ಯಾರಂಟೈನ್‌ಗಳಿಂದ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಪರೀಕ್ಷಿಸಿ ಪರೀಕ್ಷಾ ಕೇಂದ್ರದಲ್ಲಿ ಪ್ರತ್ಯೇಕವಾದ ಕೊಠಡಿಯಲ್ಲಿ ಪರೀಕ್ಷೆ ಬರೆಸಲಾಗುವುದು.

ಕೋವಿಡ್ 19 ಸೋಂಕು ದೃಡಪಟ್ಟಿರುವ ವಿದ್ಯಾರ್ಥಿಗಳಿಗೂ ಸಹ ಪೂರಕ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಇಂತಹ ಸೋಂಕಿತ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕವಾದ Designated covid care centre ಸಮಾಜಕಲ್ಯಾಣ ಇಲಾಖೆಯ ಬಾಲಕಿಯರ ವಸತಿ ನಿಲಯ ಬನ್ನಂಜೆ , ಉಡುಪಿ, ಈ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಲಾಗಿದೆ. ಅನುತ್ತೀರ್ಣಗೊಂಡ ವಿದ್ಯಾರ್ಥಿಗಳು ಆಯಾ ಕಾಲೇಜಿನಲ್ಲಿ ಪೂರಕ ಪರೀಕ್ಷೆ ಬರೆಯಲು ನೋಂದಾಯಿಸಿ ಕೊಂಡಿರುತ್ತಾರೆ. ಈ ವಿದ್ಯಾರ್ಥಿಗಳ ಮಾಹಿತಿಯು ಆಯಾ ಕಾಲೇಜಿನ ಪ್ರಾಂಶುಪಾಲರ ಬಳಿ ಇರುತ್ತದೆ. ಈ ಪರೀಕ್ಷೆ ಕಟ್ಟಿದ ವಿದ್ಯಾರ್ಥಿಗಳಲ್ಲಿ ಕೋವಿಡ್ 19 ಸೋಂಕು ದೃಡಪಟ್ಟಿರುವ ಬಗ್ಗೆ ಮಾಹಿತಿಯನ್ನು ಅಯಾ ವಿದ್ಯಾರ್ಥಿಗಳನ್ನು ಸಂಪರ್ಕಿಸಿ , ಮಾಹಿತಿಯನ್ನು ಸಂಗ್ರಹಿಸಿ ಪ್ರಾಂಶುಪಾಲರು ಉಪನಿರ್ದೇಶಕರ ಕಛೇರಿಗೆ ನೀಡುತ್ತಾರೆ. ಈ ರೀತಿ ಗುರುತಿಸಿರುವ ವಿದ್ಯಾರ್ಥಿಗಳನ್ನು covid care centre ನಲ್ಲಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲಾಗಿದೆ.



ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಮೊಬೈಲ್ ಬಳಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಪರೀಕ್ಷಾ ಕೆಲಸ ಕಾರ್ಯಗಳಿಗಾಗಿ ಸಾಮಾನ್ಯ ಮೊಬೈಲ್ (ಬೇಸಿಕ್ ಸೆಟ್) ಉಪಯೋಗಿಸಲು ಅನುಮತಿಸಲಾಗಿದೆ. ಹಾಗೂ ಪ್ರತಿ ಪರೀಕ್ಷಾ ಕೇಂದ್ರಕ್ಕೂ ಪೋಲಿಸ್ ಬಂದೋಬಸ್ತು ಒದಗಿಸಲಾಗಿದೆ.

ಪೂರಕ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ರಂತೆ ಮಾನ್ಯ ಜಿಲ್ಲಾಧಿಕಾರಿಗಳು ನಿಷೇದಾಜ್ಞೆಯನ್ನು ಜಾರಿ ಮಾಡಿರುತ್ತಾರೆ.

ಒಟ್ಟಾರೆ ಉಡುಪಿ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಸಲು ಎಲ್ಲಾ ರೀತಿಯ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಎ೦ದು ಉಡುಪಿ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಭಗವಂತ ಕಟ್ಟಿಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.