ಉಡುಪಿ: ವಿಪರೀತ ಕುಡಿಯುವ ಚಟ ಹೊಂದಿದ್ದ ಕಾರ್ಕಳ ತಾಲೂಕು ಸೂಡ ಗ್ರಾಮದ ಕುದ್ರುಬೆಟ್ಟುವಿನ ಬಾಡಿಗೆ ಮನೆಯಲ್ಲಿ ವಾಸವಿದ್ದ ನಾಗರಾಜ್ ನಾಯ್ಕ್ (42) ಎಂಬುವವರು ನವೆಂಬರ್ 13 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

ಇವರು ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ ಭಾಷೆ ಬಲ್ಲವರಾಗಿದ್ದು, ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಕಾರ್ಕಳ ಪೊಲೀಸ್ ಠಾಣಾಧಿಕರಗಳು ತಿಳಿಸಿದ್ದಾರೆ.