ಉಡುಪಿ (ಸೆಪ್ಟೆಂಬರ್,23): ರಾಜ್ಯದಾದ್ಯಂತ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಪಿಂಚಣಿ ಪಡೆಯುತ್ತಿರುವ ಕರ್ನಾಟಕ ಸರಕಾರದ ಪಿಂಚಣಿದಾರರು / ಕುಟುಂಬ ಪಿಂಚಣಿದಾರರು ಎಸ್.ಬಿ.ಐ., ಕೆನರಾ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್ (ಪ್ರಸ್ತುತ ಕೆನರಾ ಬ್ಯಾಂಕ್), ವಿಜಯಾ ಬ್ಯಾಂಕ್, ದೇನಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ (ಪ್ರಸ್ತುತ ಬ್ಯಾಂಕ್ ಆಫ್ ಬರೋಡಾ), ಕಾರ್ಪೋರೇಷನ್ ಬ್ಯಾಂಕ್, ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ, ಆಂಧ್ರ ಬ್ಯಾಂಕ್ (ಪ್ರಸ್ತುತ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ) ಗಳನ್ನು ಹೊರತುಪಡಿಸಿ, ಉಳಿದ ಬ್ಯಾಂಕ್‌ಗಳಲ್ಲಿ ಪಿಂಚಣಿಯನ್ನು ಪಡೆಯುತ್ತಿರುವ ಪಿಂಚಣಿದಾರರು ಕೂಡಲೇ ತಮ್ಮ ಪಿಂಚಣಿಯನ್ನು ಮೇಲ್ಕಂಡ ಬ್ಯಾಂಕ್‌ಗಳಿಗೆ ವರ್ಗಾಯಿಸಬೇಕು.
೨೦೨೦ ರಿಂದ ಮೇಲ್ಕಂಡ ಬ್ಯಾಂಕ್‌ಗಳಲ್ಲಿ ಮಾತ್ರ ಪಿಂಚಣಿಯನ್ನು ಪಾವತಿಸಲಾಗುವುದು ಎಂದು ಜಿಲ್ಲಾ ಖಜಾನೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.