ಉಡುಪಿ,(ಸೆಪ್ಟೆಂಬರ್, 4):   ಯುವ  ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯ ಪ್ರಸ್ತಕ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ ಅಡಿಯಲ್ಲಿ ಯುವ ಜನ ಮೇಳ ಹಾಗೂ ಯುವಜನೋತ್ಸವ ಸ್ಪರ್ಧಾ ಕಾರ್ಯಕ್ರಮದಲ್ಲಿ ವೈಯಕ್ತಿಕ /ಗುಂಪು ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ವಿಜೇತರಿಗೆ ಹಾಗೂ ಯುವಕ/ಯುವತಿ ಸಂಘ ಸಂಸ್ಥೆಗಳಿಗೆ ಪ್ರೋತ್ಸಾಹ ಧನ ನೀಡಲು ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಪ ಜಾತಿ ಮತ್ತು ಪ ಜಾತಿ ಅರ್ಹ ಯುವಕ/ಯುವತಿಯರು ತಮ್ಮ ಪ್ರಸ್ತಾವನೆಯ ಅರ್ಜಿಯನ್ನು ಸಹಾಯಕ ನಿರ್ದೇಶಕರು,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇಲ್ಲಿಗೆ ಸೆಪ್ಟೆಂಬರ್ 30ರೊಳಗೆ ಸಲ್ಲಿಸಬೇಕು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,ಉಡುಪಿ ಜಿಲ್ಲೆ (0820-2521324,94808-86467) ಇವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.