ಉಡುಪಿ,(ಫೆಬ್ರವರಿ 23): ಪ್ರಥಮ ಹಂತದ ಕೋವಿಡ್ ಲಸಿಕೆ ಪಡೆಯಲು ಈಗಾಗಲೇ ನೊಂದಾಯಿಸಿಕೊAಡು, ಇದುವರೆಗೂ ಲಸಿಕೆ ಪಡೆಯದ ಸರಕಾರಿ ಮತ್ತು ಖಾಸಗಿ ವಲಯದ ಆರೋಗ್ಯ ಕ್ಷೇತ್ರದ ಕಾರ್ಯಕರ್ತರು ಲಸಿಕೆ ಪಡೆಯಲು ಇಂದು (ಬುಧವಾರ) ಕೊನೆಯ ಅವಕಾಶ ನೀಡಲಾಗಿದೆ.

 ಆದ್ದರಿಂದ ಪ್ರಥಮ ಹಂತದ ಲಸಿಕೆ ಪಡೆಯಲು ಹೆಸರು ನೊಂದಾಯಿಸಿಕೊoಡು, ಇದುವರೆಗೂ ಲಸಿಕೆ ಪಡೆಯದ ಸರಕಾರಿ ಮತ್ತು ಖಾಸಗಿ ವಲಯದ ಆರೋಗ್ಯ ಕ್ಷೇತ್ರದ ಕಾರ್ಯಕರ್ತರು, ಜಿಲ್ಲೆಯಲ್ಲಿನ ತಮ್ಮ ಸಮೀಪದ ಸರ್ಕಾರಿ ಆಸ್ಪತ್ರೆಗಳಲ್ಲಿ ಮತ್ತು ಖಾಸಗಿ ಆಸ್ಪತ್ರೆಗಳಾದ ಕೆ.ಎಂ.ಸಿ. ಮಣಿಪಾಲ, ಸಿ.ಎಸ್.ಐ. ಲೊಂಬಾರ್ಡ್ ಆಸ್ಪತ್ರೆ ಉಡುಪಿ, ಆದರ್ಶ ಆಸ್ಪತ್ರೆ ಉಡುಪಿ, ಎಸ್.ಡಿ.ಎಂ ಉದ್ಯಾವರ,  ಕುಂದಾಪುರದ ಆದರ್ಶ ಆಸ್ಪತ್ರೆ, ಎನ್.ಆರ್. ಆಚಾರ್ಯ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.