ಉಡುಪಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೊತ್ತರ ಅದ್ಯಯನ ಕೇಂದ್ರ ತೆಂಕನಿಡಿಯೂರು ಹಾಗೂ ಗೊರಟ್ಟಿ ಆಸ್ಪತ್ರೆ ಕಲ್ಯಾಣಪುರ ಇದರ ಸಹಯೋಗದಲ್ಲಿ ಬ್ರಹ್ಮಾವರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ವಿದ್ಯಾರ್ಥಿಗಳಿಗೆ ಹಿರಿಯ ಮತ್ತು ಯುವ ಪಿಳಿಗೆಯ ನಡುವಿನ ಹೊಂದಾಣಿಕೆ ಎಂಬ ವಿಷಯದ ಕುರಿತು ಮಾಹಿತಿ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಸಂಯೋಜಕ ಗಣೇಶ್ ಕೊಕ್ಕರ್ಣೆ ವಿದ್ಯಾರ್ಥಿಗಳಿಗೆ ಹಿರಿಯರ ಮನಸ್ಥಿತಿ ಹಾಗೂ ಇಂದಿನ ಅವರ ಪರಿಸ್ಥಿತಿ, ಹಿರಿ-ಕಿರಿಯರ ನಡುವಿನ ಹೊಂದಾಣಿಕೆ, ಹಿರಿಯರ ರಕ್ಷಣೆಯಲ್ಲಿ ಕುಟುಂಬ ಹಾಗೂ ಸಮಾಜದ ಜವಾಬ್ದಾರಿ, ಮುಂತಾದ ವಿಷಯಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಪಿ.ಯು.ಕಾಲೇಜಿನ ಹಿರಿಯ ಶಿಕ್ಷಕರು, ಸ.ಪ್ರ.ದ.ಕಾಲೇಜು ಹಾಗೂ ಸ್ನಾತಕೊತ್ತರ ಅದ್ಯಯನ ಕೇಂದ್ರದ ಉಪನ್ಯಾಸಕಿ ಅಮಿತಾ, ಗೊರಟ್ಟೆ ಆಸ್ಪತ್ರೆಯ ಸಮಾಜ ಕಾರ್ಯದ ಸಂಯೋಜಕ ರಾಕೇಶ್ ಹಾಗೂ ತೆಂಕನಿಡಿಯೂರು ಕಾಲೇಜಿನ ಎಮ್.ಎಸ್.ಡಬ್ಲೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.