ಉಡುಪಿ,(ಅಕ್ಟೋಬರ್ 20): ಬಾಲ ನ್ಯಾಯ ಕಾಯ್ದೆ 2015 ಹಾಗೂ ಬಾಲನ್ಯಾಯ ಮಾದರಿ ನಿಯಮ 2016 ರ ಅನ್ವಯ ಜಿಲ್ಲೆಗಳಿಂದ ಮಕ್ಕಳ ಕಲ್ಯಾಣ ಸಮಿತಿಗಳಿಗೆ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಬಾಲನ್ಯಾಯ ಮಂಡಳಿಗಳಿಗೆ ಸದಸ್ಯರನ್ನು 2020 ರಿಂದ 2023 ರ ವರೆಗೆ ಸದಸ್ಯತ್ವಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

    ಅರ್ಜಿ ನಮೂನೆಯು ನಿರ್ದೇಶನಾಲಯದ ವೆಬ್‍ಸೈಟ್ https://icps.karnataka.gov.in/ ರಲ್ಲಿ ಲಭ್ಯವಿದ್ದು, ಭರ್ತಿ ಮಾಡಿದ ಅರ್ಜಿಯನ್ನು ನಿರ್ದೇಶಕರು, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಕೇರಾಫ್ ಮಹಿಳಾ ಮತ್ತು ಮಕ್ಕಳ ನಿರ್ದೇಶನಾಲಯ, ಡಾ. ಅಂಬೇಡ್ಕರ್ ಬೀದಿ, ಬೆಂಗಳೂರು ಇವರಿಗೆ  ನವೆಂಬರ್ 15 ರ ಒಳಗೆ ಸಲ್ಲಿಸಬೇಕು.

     ಹೆಚ್ಚಿನ ಮಾಹಿತಿಗಾಗಿ ನಿರ್ದೇಶನಾಲಯದ ದೂರವಾಣಿ ಸಂಖ್ಯೆ: 080-22879382 / 83 ಅಥವಾ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ದೂರವಾಣಿ ಸಂಖ್ಯೆ: 0820-2574964 ಸಂಪರ್ಕಿಸುವಂತೆ ಜಿಲ್ಲಾ ಸಮಗ್ರ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.