ಉಡುಪಿ : ರಾಜ್ಯದ ಮೂಲೆ ಮೂಲೆಗಳಲ್ಲಿ ಭೀಕರ ಮಳೆಯ ಪರಿಣಾಮವಾಗಿ ಜನಜೀವನ‌ ಅಸ್ತವ್ಯಸ್ತಗೊಂಡಿದ್ದು, ಜಾನುವಾರುಗಳ ಸಹಿತ ಜನರು ಪರದಾಡುವಂತಾಗಿದೆ. ಅದೇ ರೀತಿ ಉಡುಪಿ ಜಿಲ್ಲೆಯಲ್ಲಿ ಕೂಡ ಮಳೆಯ ಪ್ರಮಾಣ ಹೆಚ್ಚಾಗುತ್ತಿದ್ದು  ಸಂಸದೆ ಶೋಭಾ ಕರಂದ್ಲಾಜೆ ಅವರ ನೇತೃತ್ವದಲ್ಲಿ  ರಚನೆಯಾದ ತಂಡವು ಇಂದು ಜನರ ಸಮಸ್ಯೆಗೆ ಪರಿಹಾರ ನೀಡುವ ಕಾರ್ಯದಲ್ಲಿ ತೊಡಗಿದ್ದಾರೆ.

ಮಳೆಯಿಂದಾಗಿ ತತ್ತರಿಸಿರುವ ಜನರಿಗೆ ಸ್ಥಳದಲ್ಲೇ ಸೂಕ್ತ ಪರಿಹಾರ ಕೂಡ ಒದಗಿಸಲಾಗಿದ್ದು, ರಕ್ಷಣಾ ಕಾರ್ಯ ಕೂಡ ನಡೆಯುತ್ತಿದೆ.ದಕ್ಷಿಣ ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್, ಕೋಟ ಶ್ರೀನಿವಾಸ್ ಪೂಜಾರಿ, ಶಾಸಕ ಕೆ ರಘುಪತಿ ಭಟ್, ಬೈಂದೂರು ಶಾಸಕರಾದ ಸುಕುಮಾರ್ ಶೆಟ್ಟಿ, ಕಾಪು ಶಾಸಕರಾದ ಲಾಲಾಜಿ ಮೆಂಡನ್,ಹಾಲಾಡಿ ಶ್ರೀನಿವಾಸ ಶೆಟ್ಟಿ, ಪುತ್ತೂರು ಶಾಸಕರಾದ ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಹೆಪ್ಸಿಭಾ ರಾಣಿ ಕೊರ್ಲಪಾಟಿ, ಎಸ್‌ಪಿ ನಿಶಾ ಜೇಮ್ಸ್, ಹಾಗೂ  ಅಧಿಕಾರಿಗಳು ಭಾಗವಹಿಸಿದ್ದರು.