ಉಡುಪಿ,(ಮಾರ್ಚ್ 4): ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕ, ಶ್ರೀ ದುರ್ಗಾ ಪರಮೇಶ್ವರಿ ಫ್ರೆಂಡ್ಸ್ ಕ್ಲಬ್ (ರಿ) ಅಬ್ಬನಡ್ಕ ನಂದಳಿಕೆ, ಹಳೆ ವಿದ್ಯಾರ್ಥಿ ಸಂಘ ಕೆದಿಂಜೆ, ಲಿಟ್ಲ್ ಫ್ಲವರ್ ಫ್ರೆಂಡ್ಸ್ ಇಟ್ಟಮೇರಿ ಹಾಗೂ ಜೇಸಿಐ ಬೆಳ್ಮಣ್ ಇವರ ಸಹಯೋಗದೊಂದಿಗೆ ಮಹಿಳಾ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮವು ಮಾರ್ಚ್ 7 ರಂದು ಸಂಜೆ 5 ಗಂಟೆಗೆ ಕಾರ್ಕಳ ತಾಲೂಕು ಕೆದಿಂಜೆ ಶ್ರೀ ವಿದ್ಯಾಬೋಧಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಉದ್ಘಾಟಿಸಲಿದ್ದು, ನಂದಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷ ನಿತ್ಯಾನಂದ ಅಮೀನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಗೃಹ, ಕಾನೂನು, ಸಂಸದೀಯ ವ್ಯವಹಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ, ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಸಭಾ ಸದಸ್ಯ ಓಸ್ಕರ್ಫೆ ರ್ನಾಂಡೀಸ್, ಸಂಸದರುಗಳಾದ ಶೋಭಾ ಕರಂದ್ಲಾಜೆ, ವಿಧಾನಪರಿಷತ್ ಶಾಸಕರುಗಳಾದ ಆಯನೂರು ಮಂಜುನಾಥ, ಎಸ್.ಎಲ್.ಭೋಜೆಗೌಡ, ಡಾ||ತೇಜಸ್ವಿನಿ ಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಬೆಂಗಳೂರು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಮಣಿರಾಜ ಶೆಟ್ಟಿ, ಕಾರ್ಕಳ ತಾಲೂಕು ಪಂಚಾಯತ್ ಅಧ್ಯಕ್ಷೆ ಸೌಭಾಗ್ಯ ಮಡಿವಾಳ ಭಾಗವಹಿಸಲಿದ್ದಾರೆ.