ಉಡುಪಿ(ನವೆಂಬರ್ 4) : ಭಾರತ ಚುನಾವಣಾ ಆಯೋಗವು ಚುನಾವಣೆಗೆ ಸಂಬAಧಿಸಿದAತೆ ಪ್ರಸಕ್ತ ಸಾಲಿನಲ್ಲಿ ಮತದಾರರ ಶಿಕ್ಷಣ ಮತ್ತು ಅರಿವು ಮೂಡಿಸುವಲ್ಲಿ ಅತ್ಯುತ್ತಮ ಪ್ರಚಾರ ಹಾಗೂ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡ ಮಾಧ್ಯಮ ಸಂಸ್ಥೆಗಳಿAದ ರಾಷ್ಟ್ರಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ.

ಪ್ರಶಸ್ತಿಯನ್ನು ಒಟ್ಟು ನಾಲ್ಕು ವಿಭಾಗಗಳಲ್ಲಿ ನೀಡಲಾಗುತ್ತಿದ್ದು, ಮುದ್ರಣ ಮಾಧ್ಯಮ, ವಿದ್ಯುನ್ಮಾನ ಮಾಧ್ಯಮ, ರೇಡಿಯೋ ಮತ್ತು ಆನ್‌ಲೈನ್ (ಇಂಟರ್‌ನೆಟ್)/ಸೋಷಿಯಲ್ ಮೀಡಿಯಾ ಸಂಸ್ಥೆಗಳು “National Media Award-2020”ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

     ಆಸಕ್ತ ಮಾಧ್ಯಮ ಸಂಸ್ಥೆಗಳು ಭಾರತ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ನವೆಂಬರ್ 20 ಕೊನೆಯ ದಿನ.

     ಹೆಚ್ಚಿನ ಮಾಹಿತಿಗಾಗಿ ಭಾರತ ಚುನಾವಣಾ ಆಯೋಗದ ವೆಬ್‌ಸೈಟ್ media.election.eci@gmail.com  ಅಥವಾ ದೂರವಾಣಿ ಸಂಖ್ಯೆ: 011-23052133 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.