ಉಡುಪಿ: ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವ, ಕೋಟ ಶ್ರೀನಿವಾಸ ಪೂಜಾರಿ, ಅವರು ಮೇ 16 ರಂದು ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ಕುಂದಾಪುರ ತಹಶೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆಂದು ಸಚಿವರ ಕಚೇರಿಯ ಪ್ರಕಟಣೆ ತಿಳಿಸಿದೆ.